Sunday, August 24, 2025
Google search engine
HomeUncategorizedನಾಳೆಯಿಂದ ಹೈಸ್ಕೂಲ್ ಓಪನ್

ನಾಳೆಯಿಂದ ಹೈಸ್ಕೂಲ್ ಓಪನ್

ನಾಳೆ ಶಾಂತಿಯುತ ಎಲ್ಲಾ ತರಗತಿಗಳು ನಡೆಯುತ್ತವೆ. ಅದನ್ನ ನೋಡಿಕೊಂಡು ಕಾಲೇಜುಗಳ ಆರಂಭದ ಬಗ್ಗೆ ನಿರ್ಧರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಎರಡೂ ವರ್ಷದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಈ ಬಜೆಟ್ ನಲ್ಲಿ ಅದಕ್ಕೆ ಬೂಸ್ಟ್ ಕೊಡೋ ಪ್ರಯತ್ನ ಮಾಡುತ್ತೇವೆ. ಶಾಲಾ ಕಾಲೇಜುಗಳನ್ನ ಆರಂಭಿಸೋದು ನಮ್ಮ ಮೊದಲ ಆಧ್ಯತೆ. ಮೊದಲಿನ ಹಾಗೇ ಸೌರ್ಹದಯುತವಾಗಿ ಶಾಲಾ ಕಾಲೇಜುಗಳನ್ನ ಆರಂಭಿಸುತ್ತೇವೆ..ಈಗಾಗಲೇ ಜಿಲ್ಲಾಧಿಕಾರಿಗಳು, ಶಾಲಾಡಳಿತ ಮಂಡಳಿಗಳಿಗೆ ಶಾಂತಿ ಸಭೆ ಮಾಡಲು ತಿಳಿಸಿದ್ದೇನೆ. ಯಾರು ಪ್ರಚೋದನೆ ನೀಡ್ತಾರೆ, ಸೋಷಿಯಲ್ ಮೀಡಿಯಾದಲ್ಲಿ ಸಂದೇಶವನ್ನ ಹಾಕ್ತಾರೆ ಅವೆಲ್ಲವನ್ನೂ ನಮ್ಮ ಅಧಿಕಾರಿಗಳು ಗಮನಿಸುತ್ತಾರೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments