Site icon PowerTV

ಬಿಜೆಪಿ ಗೆದ್ದರೇ ಭರ್ಜರಿ ಗಿಫ್ಟ್​​ : ಸಚಿವ ರಾಜನಾಥ್ ಸಿಂಗ್

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ ಹೋಳಿ ಮತ್ತು ದೀಪಾವಳಿ ಹಬ್ಬದ ದಿನ ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶ ಗೊಂಡಾದ ಕರ್ನಲ್ ಗಂಜ್​ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಚಾರ ನಡೆಸಿದರು. ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯು ಅತಿಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ ಮೊದಲ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯು ಕಳೆದ ಬಾರಿಯಷ್ಟೇ ಸ್ಥಾನಗಳನ್ನು ಗೆದ್ದುಕೊಳ್ಳಲಿದೆ ಎಂದು ಚುನಾವಣಾ ವಿಶ್ಲೇಷಕರು ಹೇಳಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Exit mobile version