Site icon PowerTV

‘ರಾಗಾ’ ಆಹ್ವಾನಕ್ಕೆ ನೋ ಎಂದ ಸಿದ್ದು

ರಾಷ್ಟ್ರರಾಜಕಾರಣದ ಪ್ರವೇಶದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಷ್ಟ್ರ ರಾಜಕಾರಣಕ್ಕೆ ಬನ್ನಿ ಎಂದು ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ನನಗೆ ಆಹ್ವಾನ ನೀಡಿದ್ದರು ಎಂದು ಹೇಳಿದ್ದಾರೆ.

ಕೊಪ್ಪಳ ಮತ್ತು ಮೈಸೂರು ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ನಂತರ ರಾಷ್ಟ್ರ ರಾಜಕಾರಣ ಸಹವಾಸವೇ ಬೇಡ. ಮತ್ತೆ ರಾಷ್ಟ್ರ ರಾಜಕಾರಣಕ್ಕೆ ಬರುವುದಿಲ್ಲ ಎಂದು ಆಹ್ವಾನ ತಿರಸ್ಕರಿಸಿದೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ದೇಶ ಕೋಮುವಾದದಿಂದ ತತ್ತರಿಸಿ ಹೋಗಿದೆ. ತಮ್ಮ ವೈಫಲ್ಯಗಳನ್ನು ಮರೆಮಾಚಲು ಕೋಮುವಾದವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ. ಇದು ಭವಿಷ್ಯದ ದೃಷ್ಟಿಯಿಂದ ಅಪಾಯಕಾರಿ ಬೆಳವಣಿಗೆ ಎಂದರು.

Exit mobile version