Site icon PowerTV

ಕಾಂಗ್ರೆಸ್​​ಗೆ ಟಕ್ಕರ್​​ ಕೊಡಲು ರಾಜ್ಯ ಬಿಜೆಪಿ ಪ್ಲ್ಯಾನ್​​

ಬೆಂಗಳೂರು : ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಕೊಟ್ಟ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈಶ್ವರಪ್ಪನವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.

ಅತ್ತ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿ ಬೆಳವಣಿಗೆಯನ್ನು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ನಾಳೆ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಲ್ಲಿ ತುರ್ತು ಸಭೆ ನಡೆಸಲು ಪಕ್ಷದ ರಾಜ್ಯಾಧ್ಯಕ್ಷರಿಗೆ ಸೂಚಿಸಿದೆ.

ರಾಜ್ಯವ್ಯಾಪಿ ಹೋರಾಟಕ್ಕೆ ಕಾಂಗ್ರೆಸ್ ಪ್ಲ್ಯಾನ್ ಮಾಡಿರುವ ಹಿನ್ನೆಲೆ ಮುಂದಿನ‌ ಕಾರ್ಯತಂತ್ರದ ಬಗ್ಗೆ ಬಿಜೆಪಿ ನಾಯಕರು ಚರ್ಚಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಸಿಎಂ ಬೊಮ್ಮಾಯಿ‌, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,ಬಿಎಸ್​​ವೈ & ಈಶ್ವರಪ್ಪ ಸೇರಿದಂತೆ ರಾಜ್ಯದ ಬಿಜೆಪಿ ಪ್ರಮುಖರು ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Exit mobile version