Site icon PowerTV

ಮತದಾನದ ಗೌಪ್ಯತೆ ಉಲ್ಲಂಘನೆ , FIR ದಾಖಲು

ಕಾನ್ಪುರ್ ಮೇಯರ್ ಪ್ರಮೀಳಾ ಪಾಂಡೆ ಮತಗಟ್ಟೆಯೊಳಗೆ ಚಿತ್ರಗಳು ಮತ್ತು ವಿಡಿಯೊಗಳನ್ನು ಕ್ಲಿಕ್ ಮಾಡಿ ವಿವಾದಕ್ಕೀಡಾಗಿದ್ದಾರೆ.

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ 3ನೇ ಹಂತದ ಮತದಾನದಲ್ಲಿ ವಿದ್ಯುನ್ಮಾನ ಮತಯಂತ್ರದ ಫೋಟೋವನ್ನು ಪಾಂಡೆ ಹಂಚಿಕೊಂಡಿದ್ದಾರೆ. ಪಾಂಡೆ ಕಾನ್ಪುರದ ಹಡ್ಸನ್ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡುತ್ತಿರುವಾಗ ವಿಡಿಯೊವನ್ನು ಚಿತ್ರೀಕರಿಸಿದ್ದು ಹಲವಾರು ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡಿದ್ದಾರೆ. ವಿಷಯ ತಿಳಿದು ಜಿಲ್ಲಾಧಿಕಾರಿಗಳು ಆಕೆಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

“ಹಡ್ಸನ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಮೀಳಾ ಪಾಂಡೆ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ FIR ದಾಖಲಿಸಲಾಗಿದೆ ಎಂದು ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Exit mobile version