Site icon PowerTV

ಶೂಟಿಂಗ್​​ನಲ್ಲಿ ಮಾಜಿ ಸಿಎಂ ಬ್ಯುಸಿ..!

ಬೆಂಗಳೂರು : ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ನಡುವೆ ಮೊದಲಿನಿಂದಲೂ ನಂಟು ಇದೆ. ಚಿತ್ರರಂಗದಲ್ಲಿ ಮಿಂಚಿದ ಹಲವರು ರಾಜಕೀಯಕ್ಕೆ ಕಾಲಿಟ್ಟು ಸಾಧನೆ ಮಾಡಿದ್ದಾರೆ. ಅದೇ ರೀತಿ, ರಾಜಕೀಯದಲ್ಲಿ ಸಾಧನೆ ಮಾಡಿದ ಅನೇಕರು ನಂತರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಉದಾಹರಣೆ ಇದೆ. ಈಗಿನದ್ದು ಬಿ.ಎಸ್. ಯಡಿಯೂರಪ್ಪ ಅವರ ಸರದಿ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕನ್ನಡದ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರಕ್ಕೆ ‘ತನುಜಾ’ ಎಂದು ಶೀರ್ಷಿಕೆ ಇಡಲಾಗಿದೆ.

ಇದರ ಚಿತ್ರೀಕರಣ ಕೂಡ ಆರಂಭವಾಗಿದ್ದು, ಶೂಟಿಂಗ್​ನಲ್ಲಿ ಬಿಎಸ್​ವೈ ಭಾಗಿಯಾಗಿರುವ ಫೋಟೋಗಳು ಲಭ್ಯವಾಗಿವೆ. ಕೊವಿಡ್​ ಸಂದರ್ಭದಲ್ಲಿ ನೀಟ್​ ಪರೀಕ್ಷೆ ಬರೆಯಲು ಸುಮಾರು 350 ಕಿ.ಮೀ. ದೂರ ಪ್ರಯಾಣ ಮಾಡಿ ಗಮನ ಸೆಳೆದಿದ್ದ ಹುಡುಗಿಯ ಕಥೆ ರೋಚಕತೆಯಿಂದ ಕೂಡಿದೆ. ಆ ಘಟನೆ ಎಲ್ಲರ ಗಮನ ಸೆಳೆದಿತ್ತು. ಇದನ್ನೇ ಒನ್​ಲೈನ್ ಸ್ಟೋರಿ ಆಗಿಸಿಕೊಂಡು ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿಯವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅದರಲ್ಲಿ BSY ನಟಿಸುತ್ತಿರುವುದು ವಿಶೇಷ.

Exit mobile version