Site icon PowerTV

ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಆನೇಕಲ್ : ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಆನೇಕಲ್ ಪಟ್ಟಣದ ದೇವರಕೊಂಡಪ್ಪ ವೃತ್ತದಿಂದ ತಾಲ್ಲೂಕು ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ಮಾಡಿದ್ದಾರೆ.

ಸಚಿವ ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೇಸ್ ಶಾಸಕರು ಕೆಂಪು ಕೋಟೆ ಮೇಲೆ ರಾಷ್ಟ್ರ ಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇನೆ ಎಂಬ ಹೇಳಿಕೆ ನೀಡಿದ್ದ ಈಶ್ವರಪ್ಪ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯ ಮಾಡಿದ್ದಾರೆ. ಬಿಜೆಪಿ ಸರ್ಕಾರ ಕೂಡಲೇ ಸಚಿವ ಈಶ್ವರಪ್ಪ ಅವರನ್ನ ವಜಾ ಮಾಡಬೇಕೆಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ದೇಶ ದ್ರೋಹಿ ಹೇಳಿಕೆ ನೀಡಿರುವ ಸಚಿವ ಈಶ್ವರಪ್ಪರನ್ನ ಬಂಧಿಸಿ ಕ್ರಮ ಜರುಗಿಸಬೇಕು ಎಂದು ತಾಲ್ಲೂಕು ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಕಾಂಗ್ರೆಸ್ ಕಾರ್ಯಕರ್ತರು ಮನವಿ ಪತ್ರ ಸಲ್ಲಿಸಿದ್ದಾರೆ.

Exit mobile version