Site icon PowerTV

ಮುಸಲ್ಮಾನ ಗೂಂಡಾಗಳಿಂದ ಹತ್ಯೆ : ಕೆ ಎಸ್‌ ಈಶ್ವರಪ್ಪ

ಬೆಂಗಳೂರು : ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಅನ್ಯಕೋಮಿನ ಗುಂಪೊಂದು ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ.

ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದಾರೆ. ಕೇಸರಿ ಶಾಲು ಹಂಚಿದ್ದಾರೆ. ರಾಷ್ಟ್ರಧ್ವಜ ತೆಗೆದು ಭಗವಾಧ್ವಜ ಹಾರಿಸಿದ್ದಾರೆ ಎಂಬಂತಹ ಡಿ.ಕೆ. ಶಿವಕುಮಾರ್ ಅವರ ಪ್ರಚೋದನಕಾರಿ ಹೇಳಿಕೆಗಳಿಂದ ಕುಮ್ಮಕ್ಕು ಪಡೆದು ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ. ಸರ್ಕಾರ ಈ ಬಗ್ಗೆ ತನಿಖೆ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

Exit mobile version