Site icon PowerTV

ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ? : ಪ್ರಿಯಾಂಕ್ ಖರ್ಗೆ

ಬೆಂಗಳುರು : ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಶಿವಕುಮಾರ್ ವಿರುದ್ಧ ಸಚಿವ ಕೆ.ಎಸ್ ಈಶ್ವರಪ್ಪ ಮಾಡಿರುವ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಯುವಕನ ಕೊಲೆ ವಿಚಾರಕ್ಕೆ ಶಾಸಕ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿ ಘಟನೆ ಬಗ್ಗೆ  ಸಂಪೂರ್ಣವಾಗಿ ಮಾಹಿತಿ ಇಲ್ಲ ಆದರೆ ಮಾಧ್ಯಮಗಳಲ್ಲಿ ಸುದ್ದಿ ನೋಡಿರುವೆ. ಗೃಹ ಸಚಿವ ಜಿಲ್ಲೆಯಲ್ಲಿ ಪದೇ ಪದೇ ಈ ರೀತಿಯ ಘಟನೆಗಳ ನಡಿಯುತ್ತಿದೆ. ಹಿಜಾಬ್ ವಿಚಾರಕ್ಕೆ ಗಲಾಟೆ ನಡೆದಿದೆ, ಈಗ ಯುವಕನ ಕೊಲೆ ಆಗಿದೆ ಇದೆಲ್ಲವನ್ನು ನೋಡಿದ್ರೆ ಗೃಹ ಸಚಿವ ವೈಫಲ್ಯ ಅಂತ ಹೇಳ ಬೇಕಾಗುತ್ತದೆ. ರಾಜ್ಯದ ಗುಪ್ತಚರ ಇಲಾಖೆ ಏನ್ ಮಾಡ್ತಾಯಿದೆ ಗೃಹ ಸಚಿವರು ತಮ್ಮ ಕರ್ತವ್ಯ ಸರಿಯಾಗಿ ನಿರ್ವಹಣೆ ಮಾಡ್ತಾಯಿಲ್ಲ ಎಂದು
ಗೃಹ ಸಚಿವರ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.

ಇನ್ನು, ಪ್ರಿಯಾಂಕ್ ಖರ್ಗೆ, ಪ್ರಕರಣ ಸಂಬಂಧ ತನಿಖೆ ಆಗುತ್ತೆ ಅಂತ ಗೃಹ ಸಚಿವರೇ ಹೇಳಿದ್ದಾರೆ. ಆದರೆ ಈಶ್ವರಪ್ಪ ಮಾತ್ರ ಕೋಮು ಗಲಭೆ ಅಂತಿದ್ದಾರೆ. ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..? ಗೃಹ ಸಚಿವರ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಸಚಿವರು ಮಾಡ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಗೃಹ ಸಚಿವರಿಗಿಂತ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಎಲ್ಲ ಹೇಗೆ ಗೊತ್ತಾಗುತ್ತೆ..? ತನಿಖೆ ಬಗ್ಗೆ ಅವರಿಗೆ ಎಷ್ಟು ನಂಬಿಕೆ ಇದೆ ಅನ್ನೋದು ಗೊತ್ತಾಗುತ್ತೆ ಎಂದು ಈಶ್ವರಪ್ಪ ವಿರುದ್ಧ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Exit mobile version