Site icon PowerTV

ನವಾಬ್ ಮಲಿಕ್ ಬಂಧನ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಅವರನ್ನು ED ಬಂಧಿಸಿರುವುದನ್ನು ಖಂಡಿಸಿ ನ್ಯಾಷನಲ್ ಕಾಂಗ್ರೆಸ್​​​ ಪಕ್ಷದ ಕಾರ್ಯಕರ್ತರು ನಗರದ ಮೌರ್ಯ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದರು. ಯಾವುದೇ ನೋಟಿಸ್ ನೀಡದೆ ಬಂಧನ ಮಾಡಿರೋದು ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದರು.

ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಹಾಗೂ ಎನ್‌ಸಿಪಿ ಮುಖ್ಯ ವಕ್ತಾರ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ ಅರೆಸ್ಟ್​ ಮಾಡಿದೆ.

Exit mobile version