Site icon PowerTV

ಬಿರಿಯಾನಿ ತಿಂದು ಪಾದಯಾತ್ರೆ: ಆರ್​. ಅಶೋಕ್

ಕಾಂಗ್ರೆಸ್‍ನವರು ಬಿರಿಯಾನಿ ತಿನ್ನುತ್ತಾ ಜೊತೆಗೆ ಡಾನ್ಸ್ ಮಾಡುತ್ತಾ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ಗೆ ಈಗ ಕೆಟ್ಟ ಕಾಲ ಶುರುವಾಗಿದೆ. ಈ ಹಿಂದೆ ಮೇಕೆದಾಟು ಆರಂಭ ಮಾಡಿ ಕೋವಿಡ್ ಹಿನ್ನೆಲೆ ಅರ್ಧಕ್ಕೆ ನಿಂತು ಹೊಯಿತು. ಈಗ ಉಕ್ರೇನ್‍ನಲ್ಲಿ ನಮ್ಮ ಮಕ್ಕಳ ಸಂಕಷ್ಟದಲ್ಲಿ ಇದ್ದಾರೆ. ಆದರೂ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ ಎಂದು ಕಿಡಿಕಾರಿದರು.

ಮೇಕೆದಾಟು ವಿಚಾರ ಇನ್ನೂ ಕೋರ್ಟ್‍ನಲ್ಲಿ ಇದೆ. ಇದನ್ನು ಸೂಕ್ಷ್ಮವಾಗಿ ಬಗೆಹರಿಸಬೇಕು. ಕಾಂಗ್ರೆಸ್ ಪಾದಯಾತ್ರೆಯಿಂದ ತಮಿಳುನಾಡು ಕೈಗೆ ಅಸ್ತ್ರ ಕೊಟ್ಟಂತಾಗುತ್ತದೆ. ಈ ಹಿಂದೆ ಎಸ್‍ಎಂ ಕೃಷ್ಣ ಕಾವೇರಿ ವಿಚಾರದಲ್ಲಿ ಪಾದಯಾತ್ರೆ ಮಾಡಿ ಏನಾಗಿದೆ, ಕೋರ್ಟ್ ಛೀಮಾರಿ ಹಾಕಿತ್ತು ಎಂದು ವಾಗ್ದಾಳಿ ನಡೆಸಿದರು.

Exit mobile version