Site icon PowerTV

‘ಕಾಂಗ್ರೆಸ್​​ ರಾಜಕೀಯ ಯಾತ್ರೆ’: ಕೋಟಾ ಶ್ರೀನಿವಾಸ್ ಪೂಜಾರಿ

ಕಾಂಗ್ರೆಸ್ ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ವಾಗ್ದಾಳಿ ನಡೆಸಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿಳಂಬದಲ್ಲಿ ಯಾವುದೇ ರಾಜಕಾರಣ ಇಲ್ಲ ಕಾಂಗ್ರೆಸ್​​ನವರು ರಾಜಕೀಯ ಕಾರಣಕ್ಕೆ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಸೇರಿದಂತೆ ಯಾವುದೇ ನೀರಿನ ಯೋಜನೆ ವಿಷಯದಲ್ಲಿ ಸರ್ಕಾರ ರಾಜಿ ಮಾಡಿಕೊಂಡಿಲ್ಲ. ಕೊವಿಡ್ ಸಂದರ್ಭದಲ್ಲಿ ಪಾದಯಾತ್ರೆ ನಡೆಸಿ ಅವರಿಂದ ಆದ ಅನಾಹುತ ಅವರಿಗೆ ಅರಿವಾಗಿದೆ. ಈಗ ಮತ್ತೆ ಪಾದಯಾತ್ರೆ ಆರಂಭಿಸಿರುವುದು ಒಂದು ರಾಜಕೀಯ ಪ್ರೇರಿತವಾಗಿದೆ ಎಂದು ಕಿಡಿಕಾರಿದ್ದಾರೆ.

Exit mobile version