Site icon PowerTV

Ukraineನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್​ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಹಾವೇರಿ: ಉಕ್ರೇನ್​ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್​ ನಿವಾಸಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭೇಟಿ ನೀಡಿ, ಸಾಂತ್ವನ ಹೇಳಿದ್ದಾರೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ, ಸಿದ್ದರಾಮಯ್ಯ, ಮೃತ ವಿದ್ಯಾರ್ಥಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಇದೇ ವೇಳೆ ಸಿದ್ದರಾಮಯ್ಯ ಅವರ ಜೊತೆಗೆ ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ಹಾಜರಿದ್ದರು.

Exit mobile version