Site icon PowerTV

ಇಂದು ಸಿ.ಎಂ.ಇಬ್ರಾಹಿಂ ರಾಜೀನಾಮೆ..!

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಸಿ.ಎಂ. ಇಬ್ರಾಹಿಂ ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ಇಂದು (ಶನಿವಾರ) ರಾಜೀನಾಮೆ ಸಲ್ಲಿಸಲಿದ್ದಾರೆ.

ಮೇಲ್ಮನೆ ಪ್ರತಿಪಕ್ಷ ನಾಯಕ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಇಬ್ರಾಹಿಂ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ. ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ಸಭಾ ಪತಿ ಅವರಿಗೆ ಅಂಚೆ ಮೂಲಕ ರವಾನಿಸಲಿದ್ದಾರೆ. ಆ ನಂತರ ಸಭಾಪತಿ ಅವರಿಂದ ಕರೆ ಬಂದ ಮೇಲೆ ವೈಯಕ್ತಿಕವಾಗಿ ಭೇಟಿ ಮಾಡುವುದಾಗಿ ಇಬ್ರಾಹಿಂ ತಿಳಿಸಿದರು.

ಶನಿವಾರ ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದು ರಾಜೀನಾಮೆಗೆ ಕಾರಣ ವಿವರಿಸಲಿದ್ದಾರೆ. ಇಬ್ರಾಹಿಂ ಅವರು ಜೆಡಿಎಸ್ ಸೇರಲು ನಿರ್ಧರಿಸಿದ್ದು, ಇನ್ನೂ ದಿನಾಂಕ ನಿಗದಿಯಾಗಿಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೂಡ ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ಕರೆದಿದ್ದು, ಅದರಲ್ಲಿ ಇಬ್ರಾಹಿಂ ಭಾಗವಹಿಸಲಿದ್ದಾರೆ ಎಂದೇ ಮಾಹಿತಿಗಳು ತಿಳಿಸಿದೆ. ಆದರೆ, ಸ್ವತಃ ಇಬ್ರಾಹಿಂ ಅವರೇ ಆ ವದಂತಿಯನ್ನು ತಿರಸ್ಕರಿಸಿದ್ದಾರೆ.

Exit mobile version