Site icon PowerTV

ದೇಶದ ತಾಕತ್ತು, ಸಂಕಷ್ಷ ಸಮಯದಲ್ಲಿ ಗೊತ್ತಾಗುತ್ತದೆ – ಸಿಎಂ ಬೊಮ್ಮಾಯಿ

ಬೆಂಗಳೂರು: ನವೀನ್ ಸಾವನ್ನಪ್ಪಿದ್ದು ತುಂಬಾ ನೋವಿನ ವಿಚಾರ ಎಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಮೆಡಿಕಲ್‌ ಮುಗಿಸಿ ಬರುವ ನವೀನ್ ನನ್ನ ಅವರ ಪೋಷಕರ ಬರಮಾಡಿಕೊಳ್ಳಬೇಕಿತ್ತು. ಆದರೆ ಆತನ ಪಾರ್ಥೀವ ಶರೀರ ಬರಮಾಡಿಕೊಳ್ಳುತ್ತಿರುವುದು ನೋವಿನ ಸಂಗತಿ.ಉಕ್ರೇನ್ ರಷ್ಯಾ ಯುದ್ದದಲ್ಲಿ ಮಿಸೈಲ್ ನ ಮೆಟಲ್ ನವೀನ್ ಮೆದುಳಿಗೆ ತಗುಲಿ ಸಾವನ್ನಪ್ಪಿದ್ದ . ಘಟನೆ ನಡೆದ ದಿನದಿಂದ ನವೀನ್ ಕುಟುಂಬಸ್ಥರ ಜೊತೆಗಿದ್ದೇವೆ. ಪ್ರಧಾನಿ ಮೋದಿಯವರು ಅವರ ಕುಟುಂಬಕ್ಕೆ ಧೈರ್ಯ ಹೇಳಿದ್ರು ನಂತರ ಸರ್ಕಾರದಿಂದ ಏನು ಕ್ರಮ ಆಗಬೇಕೋ ಅದನ್ನ ಈಡೇರಿಸುವ ಭರವಸೆ ನೀಡಿದ್ದರು.

ಪ್ರಧಾನಿಗಳ ಭಗೀರಥ ಕೆಲಸದಿಂದ ಈ ಕಾರ್ಯ ಸಕಾರವಾಗಿದೆ. ಪ್ರಧಾನಮಂತ್ರಿಗಳ ಕಾರ್ಯಾಲಯದ ಜೊತೆ ನಾವು ನಿರಂತರ ಸಂಪರ್ಕದಲ್ಲಿದ್ವಿ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿಗಳಿಗೆ ಧನ್ಯವಾದ ತಿಳಿಸುತ್ತೇನೆ. ದೇಶದ ತಾಕತ್ತು ಇಂತಹ ಸಂಕಷ್ಟ ಸಮಯದಲ್ಲೆ ಗೊತ್ತಾಗೋದು ಉಕ್ರೇನ್ ಎಂಬೆಸ್ಸಿ ಜೊತೆ ನಿರಂತರ ಸಂಪರ್ಕದಲ್ಲಿದ್ವಿ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿ ಸಿಬ್ಬಂದಿಗೆ ಸಿ.ಎಂ ಧನ್ಯವಾದ ಹೇಳಿದ್ದಾರೆ.

ಉಕ್ರೇನ್ ಅಧಿಕಾರಿಗಳು ಹಾಗೂ ಪೊಲೆಂಡ್ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ ಜೀವಂತವಾಗಿ ತರಲಿಕ್ಕಾಗಲಿಲ್ಲ ಅನ್ನೊ ನೋವು ಸದಾ ಇರತ್ತೆ. ನವೀನ್ ಕುಟುಂಬದ ಜೊತೆ ನಿಂತಿದ್ದೀವಿ ಮುಂದೆಯೂ ನಿಲ್ಲುತ್ತೇವೆ. ನವೀನ್ ಸಾವಿನ ನೋವನ್ನ ಭರಿಸುವ ಶಕ್ತಿ ಆ ಕುಟುಂಬಕ್ಕೆ ಆ ದೇವರು ನೀಡಲಿ ಎಂದು ಹೇಳಿದರು.

Exit mobile version