Site icon PowerTV

ತಮಿಳುನಾಡು ವಿರುದ್ಧ ಗುಡುಗಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆಯ ವಿರುದ್ಧ ನಿರ್ಣಯ ಮಾಡಿದ್ದು, ಟ್ವೀಟ್​ ಮಾಡಿ ತಮಿಳುನಾಡು ನಿರ್ಣಯಕ್ಕೆ ಸಿಎಂ ಬೊಮ್ಮಾಯಿ ಕಿಡಿ ಕಾಡಿದ್ದಾರೆ.

ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ. ಮೇಕೆದಾಟು ಯೋಜನೆ ನಮ್ಮ ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿಗೆ ಸಂಬಂಧಿಸಿದ್ದು. ಕಾವೇರಿ ನ್ಯಾಯಾಧೀಕರಣ ಅನ್ವಯ ನೀರು ಹಂಚಿಕೆ ಆಗಿದೆ. ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಟ್ಟಿದ್ದೇವೆ. ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ರಾಜಕೀಯ ನಿರ್ಧಾರವನ್ನು ಲೆಕ್ಕಿಸಲ್ಲ. ಮೇಕೆದಾಟು ಯೋಜನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಟ್ವೀಟ್​ ಮೂಲಕ ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

Exit mobile version