Site icon PowerTV

ಕರ್ನಾಟಕವೇ ಕಮಲ ಪಡೆಯ ಮುಂದಿನ ಟಾರ್ಗೆಟ್​

ಬೆಂಗಳೂರು: ಏಪ್ರಿಲ್ 1ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಫುಲ್​ ಅಲರ್ಟ್​ ಆಗಿದ್ದಾರೆ.

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಈಗಾಗಲೇ ಪ್ರಕಟಣೆಗೊಂಡಿದ್ದು, ಕಟೀಲ್, ಪ್ರಧಾನ ಕಾರ್ಯದರ್ಶಿ, ಸಂಘಟನಾ ಕಾರ್ಯದರ್ಶಿಗಳ ಜೊತೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಮುಂದಿನ ಚುನಾವಣೆಗಳ ಬಗ್ಗೆ ಬಿಜೆಪಿ ನಾಯಕರ ಚರ್ಚೆ ನಡೆಸಲಾಗುತ್ತದೆ. ಸಂಪುಟ ವಿಸ್ತರಣೆ, ಸಚಿವರ ಕಾರ್ಯವೈಖರಿ ಬಗ್ಗೆ ಚರ್ಚೆ ನಡೆಸಲಾಗುತ್ತಿದ್ದು, ನಿಗಮ ಮಂಡಳಿ ಅಧ್ಯಕ್ಷರ ನೇಮಕ ಕುರಿತು ಸಿಎಂ ಬೊಮ್ಮಾಯಿ ಸಮಾಲೋಚನೆ ನಡೆಸಲಿದ್ದಾರೆ.

Exit mobile version