Site icon PowerTV

ಕಾಶ್ಮೀರಿ ಪಂಡಿತರ ವಲಸೆಗೆ ನಾನು ಹೊಣೆಯಲ್ಲ-ಫಾರೂಕ್ ಅಬ್ದುಲ್ಲಾ

ಜಮ್ಮು-ಕಾಶ್ಮೀರ ನ್ಯಾಶನಲ್ ಕಾನ್ಫರೆನ್ಸ್​ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಮಾತನಾಡಿ, ಬಿಜೆಪಿ ಆಡಳಿತದಲ್ಲಿರುವ ಕೆಲವು ಸರ್ಕಾರಗಳು ದಿ ಕಾಶ್ಮೀರಿ ಫೈಲ್ಸ್​ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸುತ್ತಿವೆ. ಈ ಮೂಲಕ ಜನರ ಹೃದಯದಲ್ಲಿ ನಮ್ಮ ಬಗ್ಗೆ ಇನ್ನಷ್ಟು ದ್ವೇಷ ಹುಟ್ಟುವಂತೆ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ.

1990ರ ದಶಕದಲ್ಲಿ ನಡೆದ ಕಾಶ್ಮೀರಿ ಪಂಡಿತರ ವಲಸೆ, ಹತ್ಯೆಗೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಪ್ರಾಮಾಣಿಕ ನ್ಯಾಯಾಧೀಶರ ಸಮಿತಿಯನ್ನು ರಚನೆ ಮಾಡಬೇಕು. ಆಗಷ್ಟೇ ಸತ್ಯ ಹೊರಬೀಳುತ್ತದೆ. ದುರಂತಕ್ಕೆ ಫಾರೂಕ್​ ಅಬ್ದುಲ್ಲಾರೇ ಹೊಣೆ ಎಂಬುದು ಸತ್ಯವಾದರೆ, ಈ ದೇಶದ ಯಾವುದೇ ಮೂಲೆಗೆ ಕರೆದುಕೊಂಡು ಹೋಗಿ ನೇಣಿಗೇರಿಸಿದರೂ ಅದಕ್ಕೆ ನಾನು ಸಿದ್ಧನಿದ್ದೇನೆ. ತನಿಖೆಯಾಗಲಿ ಎಂದಿದ್ದಾರೆ.

Exit mobile version