Site icon PowerTV

ಶಾಲಾ ಮಕ್ಕಳಲ್ಲಿ ವಿಷಬೀಜ ಬಿತ್ತಲಾಗುತ್ತಿದೆ- HDK

ಕೋಲಾರ: ಮಕ್ಕಳು ಮುಕ್ತವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಿ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಅವರನ್ನ ವಿಶ್ವಾಸಕ್ಕೆ ಪಡೆಯಬೇಕು. ಶಾಲಾ ಮಕ್ಕಳಲ್ಲಿ ವಿಷಬೀಜ ಬಿತ್ತಲಾಗುತ್ತಿದೆ ಎಂದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ಮುಸ್ಲಿಮರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿ ದೇಶವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ. ರಾಜ್ಯಕ್ಕೆ ಈ ರೀತಿಯ ಪರಿಸ್ಥಿತಿ ಬರುತ್ತೆಂದು ಊಹಿಸಿರಲಿಲ್ಲ. ರಾಷ್ಟ್ರೀಯ ಪಕ್ಷಗಳು ಸಮಾಜದ ಸಾಮರಸ್ಯ ಹಾಳುಮಾಡುತ್ತಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಮಾತಾಡುವ ಅಗತ್ಯವಿಲ್ಲ. ರಾಜ್ಯದ ಇಂದಿನ ಸ್ಥಿತಿಗೆ ಸಿದ್ದರಾಮಯ್ಯ ಅವರೇ ಕಾರಣ. ಸಿದ್ದರಾಮಯ್ಯರನ್ನು ನಂಬಿ ಮುಸ್ಲಿಮರು ಬೀದಿಗೆ ಬಂದಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

Exit mobile version