ಬೆಂಗಳೂರು :ಜೆಡಿಎಸ್ನ ಮಹತ್ವಾಕಾಂಕ್ಷೆ ಜನತಾ ಜಲಧಾರೆ ಬಗ್ಗೆ ಮಾಹಿತಿ ನೀಡಲು ಇಂದು ಬೆಳಿಗ್ಗೆ 11 ಗಂಟೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ.
ಕಾಂಗ್ರೆಸ್ನವರು ಮಾಡಿದ ಮೇಕೆದಾಟು ಪಾದಯಾತ್ರೆಗೆ ಸೆಡ್ಡು ಹೊಡೆಯಲು ಹೆಚ್ಡಿಕೆ ತೀರ್ಮಾನಿಸಿದ್ದು ಇಂದು ಸುದ್ದಿಗೋಷ್ಠಿಯಲ್ಲಿ ಜಲಧಾರೆ ಯಾತ್ರೆ ಆರಂಭ ಮಾಡುವ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಬಹುಶಃ ಇದೇ ತಿಂಗಳು ಏಪ್ರಿಲ್ 9 ಅಥವಾ 11 ರಂದು ಜಲಧಾರೆ ಯಾತ್ರೆಯ ದಿನಾಂಕ ನಿಗದಿ ಮಾಡಲಿದ್ದಾರೆ.
ಇನ್ನು ಸುದ್ದಿಗೋಷ್ಠಿಯಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಬಗ್ಗೆ ಖಂಡಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಿದ್ದಾರೆ. ಹಾಗೂ ಬೆಲೆ ಏರಿಕೆಯನ್ನು ತಗ್ಗಿಸುವಂತೆ ಸರ್ಕಾರಕ್ಕೆ ಆಗ್ರಹ.
ಅಲ್ಲದೇ ಹಲಾಲ್ ಕಟ್ ಮತ್ತು ಜಟ್ಕಾ ಕಟ್ ಬಗ್ಗೆಯೂ ಮಾತನಾಡುವ ಸಾಧ್ಯತೆಯಿದ್ದು, ಈ ವಿವಾದವನ್ನು ತಡೆಯುವಂತೆ ಸರ್ಕಾರಕ್ಕೆ ಸಲಹೆಯನ್ನು ಕೊಡಲಿದ್ದಾರೆ. ಇದರ ಬಗ್ಗೆ ಈಗಾಗಲೇ ಸರ್ಕಾರ ವಿರುದ್ಧ ಮಾಧ್ಯಮ ಮತ್ತು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


