Site icon PowerTV

ಸೆಪ್ಟೆಂಬರ್​​​ 30ಕ್ಕೆ ‘ಮಾರ್ಟಿನ್’ ತೆರೆಗೆ​​

‘ಪೊಗರು’ ಚಿತ್ರದ ಸಕ್ಸಸ್ ನಂತರ ನಟ ಧ್ರುವ ಸರ್ಜಾ ಎ.ಪಿ ಅರ್ಜುನ್ ನಿರ್ದೇಶನದ ‘ಮಾರ್ಟಿನ್’ ಸಿನಿಮಾದಲ್ಲಿ ನಟಿಸಿದ್ದಾರೆ.

ಆಕ್ಷನ್ ಪ್ರಿನ್ಸ್ ಧ್ರುವಾ ಸರ್ಜಾ ನಟನೆಯ ‘ಮಾರ್ಟಿನ್’ ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ. ಸ್ಯಾಂಡಲ್‌ವುಡ್ ಸ್ಟಾರ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ‘ಮಾರ್ಟಿನ್’ ಚಿತ್ರದಲ್ಲಿ ಧ್ರುವಾ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಉದಯ್ ಕೆ ಮೆಹ್ತಾ ನಿರ್ಮಾಣದ ಈ ಸಿನಿಮಾ ಸಪ್ಟೆಂಬರ್ 30ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಕಂಪ್ಲೀಟ್ ಆಗಿದ್ದು, ತೆರೆಗೆ ಅಪ್ಪಳಿಸಲು ತೆರೆಮರೆಯಲ್ಲಿ ಈಗಾಗಲೇ ತಯಾರಿ ಶುರುವಾಗಿದೆ.

Exit mobile version