Site icon PowerTV

ಕಾಂಗ್ರೆಸ್​​ ನಾಯಕರ ಭಾವಚಿತ್ರಕ್ಕೆ ಚಪ್ಪಲಿ ಏಟು: ಬಿಜೆಪಿಗರ ಆಕ್ರೋಶ

ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಹಿನ್ನೆಲೆ ಡಿ.ಕೆ.ಶಿವಕುಮಾರ್​ ಸಿದ್ಧರಾಮಯ್ಯ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಕಾರ್ಯಕರ್ತರು, ಮುಖಂಡರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಸಂಜೆ ಕೆ.ಎಸ್‌.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ. ಒಂದು ವೇಳೆ ರಾಜೀನಾಮೆ ಕೊಡದೆ ಇದ್ರೆ ಪಕ್ಷದಲ್ಲಿ ಇರಿಸುಮುರಿಸು ಆಗಬಹುದು. ಹೀಗಾಗಿ, ನನ್ನ ಮೇಲೆ ನನಗೆ ನಂಬಿಕೆ ಇದೆ. ಸಂಪೂರ್ಣ ತನಿಖೆ ಬಳಿಕ ಉತ್ತರ ಕೊಡ್ತೇನೆ ಅಂತ ಈಶ್ವರಪ್ಪ ಹೇಳಿದರು. ಹೀಗಾಗಿ ಬಿಜೆಪಿ ಪಕ್ಷದ ಕಾರ್ಯಕರ್ತರು, ಮುಖಂಡರು ನಗರದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಅದುವಲ್ಲದೇ ವಿರೋಧ ಪಕ್ಷದ ನಾಯಕರಾದ ಡಿ.ಕೆ.ಶಿವಕುಮಾರ್​​,  ಸಿದ್ಧರಾಮಯ್ಯ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮೂವರ ಭಾವಚಿತ್ರಕ್ಕೆ ಉಗುಳಿ, ಚಪ್ಪಲಿ ಏಟು ನೀಡಿದ್ದಾರೆ. ಮತ್ತು ಟೈರ್​​ಗೆ ಬೆಂಕಿ ಹಚ್ಚಿದ್ದಾರೆ.

ಇನ್ನು ಯಾವುದೇ ಕಾರಣಕ್ಕೂ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬಾರದೆಂದು ಆಗ್ರಹಿಸಿದ್ದಾರೆ.

Exit mobile version