Site icon PowerTV

ಈಶ್ವರಪ್ಪ ಸುಳ್ಳಿನ ಫ್ಯಾಕ್ಟರಿ ಇದ್ದಂತೆ : ಡಿ ಕೆ ಶಿವಕುಮಾರ್

ಬೆಂಗಳೂರು : ಈಶ್ವರಪ್ಪ ಸುಳ್ಳಿನ ಫ್ಯಾಕ್ಟರಿ ಇದ್ದಂತೆ, ಅವರನ್ನ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಈಶ್ವರಪ್ಪ ರಾಜೀನಾಮೆ ವಿಚಾರ ಹಿನ್ನಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ ಎಂದರು.

ಸದ್ಯ ಕಾಂಗ್ರೆಸ್​​​ ನಾಯಕರು ಕೆ.ಎಸ್.ಈಶ್ವರಪ್ಪರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ನಾವು ಕೇವಲ ಈಶ್ವರಪ್ಪ ವಿರುದ್ಧ ಹೋರಾಟ ಮಾಡುತ್ತಿಲ್ಲ. ಭ್ರಷ್ಟ ಸರ್ಕಾರ, ಕಮಿಷನ್ ದಂಧೆ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಗುಡುಗಿದರು.

ಸಚಿವ ಈಶ್ವರಪ್ಪಗೆ ಸಿಎಂ ಬೊಮ್ಮಾಯಿ ಸಪೋರ್ಟ್ ಇದೆ. ಇದು ದೊಡ್ಡ ತಪ್ಪು, ಸಂತೋಷ್ ಆತ್ಮಹತ್ಯೆ ಪ್ರಕರಣದ ನ್ಯಾಯಯುತ ತನಿಖೆಯಾಗಬೇಕು. ನಾವು ರಾಜ್ಯದ ಎಲ್ಲಾ ಕಡೆಯೂ ಪ್ರತಿಭಟನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

Exit mobile version