Wednesday, September 10, 2025
HomeUncategorizedದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ : ಸಚಿವ ಆರಗ ಜ್ಞಾನೇಂದ್ರ

ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ : ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ಹಣಕ್ಕಾಗಿ ಸರ್ಕಾರಿ ಜಾಬ್​​​ಗಳನ್ನು ಮಾರಾಟ ಮಾಡುವ ಗ್ಯಾಂಗ್‌ನ್ನು ಆದಷ್ಟು ಬೇಗ ಹೊರಗೆ ತರುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇದುವರೆಗೂ ದಿವ್ಯ ಹಾಗರಗಿ ಬಂಧನ ಮಾಡದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲವೂ ತನಿಖೆ ಮಾಡಲು ಸಿಐಡಿಗೆ ಕೊಟ್ಟಿದ್ದೇವೆ. ನಾನೇ ಸ್ವತಃ ಈ ಬಗ್ಗೆ ತೀರ್ಮಾನ ಮಾಡಿ, ಸಿಎಂ ಗಮನಕ್ಕೆ ತಂದಿದ್ದೇವೆ ಎಂದರು.

ಅದುವಲ್ಲದೇ ದಿವ್ಯ ಹಾಗರಗಿ ಸ್ಟ್ರಾಂಗ್ ಏನಿಲ್ಲ. ಅವರು ಊರು ಬಿಟ್ಟಿದ್ದಾರೆ. ಅಲ್ಲದೇ ಈಗಾಗಲೇ ಅವರಿಗೆ ಅರೆಸ್ಟ್ ವಾರೆಂಟ್ ಸಹ ಜಾರಿ ಮಾಡಲಾಗಿದೆ . ಶೀಘ್ರವೇ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಲಿದ್ದಾರೆ. ಆದ್ದರಿಂದ ಅವರು ಗೌರವಯುತವಾಗಿ ಬಂದು ಶರಣಾಗಬೇಕು ಎಂದು ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಹಾಜರಾಗದ ವಿಚಾರಕ್ಕೆ ಪ್ರತಿಕ್ರಿಯಿಸಿ ಅವರ ಮೇಲೆ ಅನೇಕ ಆರೋಪಗಳನ್ನು ಮಾಡಿದ್ದಾರೆ. ಸಿಐಡಿಯವರು ಅವರಿಗೆ ನೋಟಿಸ್ ಕೊಟ್ಟಿದ್ದಾರೆ. ಆದರೆ ಇವರು ತನಿಖೆಗೆ ಸಹಕಾರ ಕೊಡದೆ ಪಲಾಯನ ಮಾಡಿದ್ದಾರೆ. ಅವರಿಗೆ ಕಾನೂನು ಗೊತ್ತಿಲ್ಲ. PSI ಪ್ರಕರಣಕ್ಕೆ ಸಂಬಂಧಪಟ್ಟ  ದಾಖಲೆಗಳಿದ್ದರೆ ಕೊಡಬಹುದು ಅಲ್ವಾ..? ಅವರ ತಂದೆ ಎಷ್ಟು ದೊಡ್ಡವರು..? ಅವರಿಗೆ ತನಿಖೆ ಬಗ್ಗೆ ಗೊತ್ತಿಲ್ವಾ..? ಅವರನ್ನು ಏನು ಅರೆಸ್ಟ್ ಮಾಡ್ತಾರಾ..? ಎಂದು ಪ್ರಶ್ನೆಗಳನ್ನು ಕೇಳಿದರು.

ಅದುವಲ್ಲದೇ ಅವರ ಬಳಿ ಇರೋ ದಾಖಲೆ ಕೊಡಲಿ. ಬುಟ್ಟಿಯಲ್ಲಿ ಹಾವು ಇಟ್ಟುಕೊಂಡು ಬಿಡ್ತೀನಿ ಬಿಡ್ತೀನಿ ಅನ್ನೋದು ಎಷ್ಟು ಸರಿ..? ಇದನ್ನು ಪ್ರಾಮಾಣಿಕವಾಗಿ ಆಗಬೇಕು, ಅಕ್ರಮವಾಗಿ ಆಗಬಾರದು ಎಂದು ಆರಗ ಜ್ಞಾನೇಂದ್ರ ಅವರು ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular

Recent Comments