Thursday, September 11, 2025
HomeUncategorizedಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ : ಮೊಹಮ್ಮದ್ ನಲಪಾಡ್

ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ : ಮೊಹಮ್ಮದ್ ನಲಪಾಡ್

ಧಾರವಾಡ: ಸರ್ಕಾರದ ವೈಫಲ್ಯ, ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿ ಜಾತಿ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್​ ಆರೋಪ ಮಾಡಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎಂದರೆ ಬೆಲೆ ಏರಿಕೆ ಸರ್ಕಾರ. ಕಾಂಗ್ರೆಸ್ ಸರ್ಕಾರ ಇದ್ದಾಗ ಒಂದು ರೂಪಾಯಿ ಎರಡೂ ರೂಪಾಯಿ ಏರಿಕೆಯಾದರೂ ಬಿಜೆಪಿ ನಾಯಕರು ರಸ್ತೆಗೆ ಬಂದು ಗ್ಯಾಸ್ ಹಿಡಿದು ಪ್ರತಿಭಟನೆ ಮಾಡುತ್ತಿದ್ದರು. ಈಗ ಎಲ್ಲಿದ್ದಾರೆ ಆ ನಾಯಕರು? ಜನಸಾಮಾನ್ಯರಿಗೆ ಆಗುತ್ತಿರುವ ಕಷ್ಟಕ್ಕೆ ಮಾತನಾಡಲು ಯಾರೂ ಬರುತ್ತಿಲ್ಲ ಎಂದು ಹರಿಹಾಯ್ದರು.

ಇನ್ನು ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ಬಗ್ಗೆ ಬಿಜೆಪಿ ನಾಯಕರು ಮಾತನಾಡುತ್ತಿಲ್ಲ. ಅವರ ವೈಫಲ್ಯ ಹಾಗೂ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಈಗ ಜಾತಿ ಮೇಲೆ ಬಲ ಪ್ರಯೋಗ ಮಾಡುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಜೊತೆ ಕರ್ನಾಟಕದ ಯುವಕರು ಇದ್ದಾರೆ. ಸರ್ಕಾರದ ಭ್ರಷ್ಟಾಚಾರ ಬೆಲೆ ಏರಿಕೆ ವಿರುದ್ಧ ಹೋರಾಟ ನಿರಂತರವಾಗಿರುವುದು ಎಂದರು.

RELATED ARTICLES
- Advertisment -
Google search engine

Most Popular

Recent Comments