Saturday, August 23, 2025
Google search engine
HomeUncategorizedಚಂದನವನದ ಖ್ಯಾತ ನಟ ಮೋಹನ್​ ಜುನೇಜ ಇನ್ನಿಲ್ಲ

ಚಂದನವನದ ಖ್ಯಾತ ನಟ ಮೋಹನ್​ ಜುನೇಜ ಇನ್ನಿಲ್ಲ

ಸ್ಯಾಂಡಲ್‌ವುಡ್‌ ಹಾಸ್ಯನಟ ಮೋಹನ್​ ಜುನೇಜ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ

ಅನಾರೋಗ್ಯದಿಂದ ಬಳಲುತ್ತಿದ್ದ ಹಾಸ್ಯನಟ ಚಿಕಿತ್ಸೆ ಫಲಕಾರಿಯಾಗದೆ ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಟ ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ. ನವಗ್ರಹ, ಕೆಜಿಎಫ್‌, ಗಣೇಶನ ಗಲಾಟೆ, ಜೋಗಿ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಮೋಹನ್ ಜುನೇಜ ನಟಿಸಿದರು. ನಟ ಮೋಹನ್ ಜುನೇಜ ಪತ್ನಿ ಹಾಗೂ ಇಬ್ಬರು ಪುತ್ರರನ್ನ ಅಗಲಿದ್ದಾರೆ. ಅವರ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ.

ನೂರಾರು ಸಿನಿಮಾಗಳಲ್ಲಿ ಅಭಿನಯಿಸಿರುವ ಮೋಹನ್ ಹಾಸ್ಯ ಪಾತ್ರಗಳ ಮೂಲಕ ಹೆಚ್ಚು ಫೇಮಸ್ ಆಗಿದ್ರು. ಕೆಜಿಎಫ್‌ ಸಿನಿಮಾದಲ್ಲಿ ಒಂದು ಪಾತ್ರ ಮಾಡಿ ಜನಮನ ಗೆದ್ದಿದ್ರು. ಚಿಕ್ಕಬಾಣವರದ ಬಳಿ ಇರುವ ತಮ್ಮೇನಹಳ್ಳಿಯಲ್ಲಿನ ಮೋಹನ್ ಜುನೇಜ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ ನಂತರ ಅಂತ್ಯ ಸಂಸ್ಕಾರಕ್ಕೆ ಕುಟುಂಬದಿಂದ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.

RELATED ARTICLES
- Advertisment -
Google search engine

Most Popular

Recent Comments