Site icon PowerTV

ದೇಶದಲ್ಲಿ ಹೆಚ್ಚಾಗುತ್ತಿದೆ ಮಹಾಮಾರಿ ಕೊರೋನಾ

ದೇಶದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ನಾಲ್ಕನೇ ಅಲೆ ಭಯವನ್ನು ಮತ್ತಷ್ಟು ಹೆಚ್ಚು ಮಾಡಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,451 ಜನರಿಗೆ ಕೊರೋನಾದೃಢಪಟ್ಟಿದ್ದು , ದೇಶದಲ್ಲಿ ಕಳೆದ 24 ಗಂಟೆಯಲ್ಲಿ 40 ಜನರು ಬಲಿಯಾಗಿದ್ದಾರೆ.

20,635 ಜನರಲ್ಲಿ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಒಂದು ದಿನದಲ್ಲಿ 3,60,613 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಇದುವರೆಗೆ 84.06 ಕೋಟಿ ಮಂದಿಯ ಮಾದರಿಯನ್ನು ಪರೀಕ್ಷಿಸಲಾಗಿದೆ. ಇದುವರೆಗೆ 190.20ರಷ್ಟು ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ವರದಿ ನೀಡಿದೆ.

Exit mobile version