Site icon PowerTV

ಮೂರನೇ ದಿನಕ್ಕೆ ಕಾಲಿಟ್ಟ ಕಿಮ್ಮನೆ ಪಾದಯಾತ್ರೆ

ಶಿವಮೊಗ್ಗ: ಇಂದು 3ನೇ ದಿನಕ್ಕೆ ಕಾಲಿಟ್ಟ ಕಿಮ್ಮನೆ ಪಾದಯಾತ್ರೆಗೆ ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಕೈ ಜೋಡಿಸಿದ್ದಾರೆ.

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ದ ತೀರ್ಥಹಳ್ಳಿ ಕಾಂಗ್ರೆಸ್ ಹೋರಾಟಕ್ಕಿಳಿದಿದೆ. ಪಾದಯಾತ್ರೆ ಇಂದು ಮಂಡಗದ್ದೆಯ ನೆಲ್ಲಿಸರ ಕ್ಯಾಂಪ್ ನಿಂದ ಆರಂಭಗೊಂಡಿತು.

PSI ಹಗರಣ ಸೇರಿದಂತೆ ಸರ್ಕಾರದ ಭ್ರಷ್ಟಾಚಾರ ಖಂಡಿಸಿ‌ ಕಾಂಗ್ರೆಸ್ ಹೋರಾಟ ನಡೆಸ್ತಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಮಾಡಲಾಗುತ್ತಿದೆ. ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಸ್ವಗ್ರಾಮ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ ಪಾದಯಾತ್ರೆ ನಡೆಯಲಿದೆ .ಮೇ 10ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಪಾದಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗಿದ್ದರು.

Exit mobile version