Site icon PowerTV

ನನಗೆ ಇನ್ನು 90 ವರ್ಷ ಆಗಿಲ್ಲ : ಹೆಚ್.ಡಿ. ದೇವೇಗೌಡ

ಚಿಕ್ಕಮಗಳೂರು: ಜೆಡಿಎಸ್ ಅಧಿಕಾರಕ್ಕೆ ತಂದು ಕೊನೆ ಉಸಿರು ಬಿಡಬೇಕೆಂಬುದೇ ನನ್ನ ಹಠ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ 90 ವರ್ಷ ಆಗಿದೆ ಅಂತ ಯಾರೋ ಹೇಳಿದ್ರು ನನಗೆ ಇನ್ನು 90 ವರ್ಷ ಆಗೇ ಇಲ್ಲ. ನನ್ನ ಜೀವನದ ಕೊನೆ ಆಸೆ ಏನು ಗೊತ್ತಾ ಒಂದು ಪ್ರಾದೇಶಿಕ ಪಕ್ಷವನ್ನ ಉಳಿಸಿ, ಅಧಿಕಾರಕ್ಕೆ ತರಬೇಕು ಅಧಿಕಾರಕ್ಕೆ ತಂದು ಕೊನೆ ಉಸಿರು ಬೀಡಬೇಕೆಂಬುದೇ ನನ್ನ ಹಠ ಎಂದರು.

ಅದುವಲ್ಲದೇ, ನಾನು ಸೂಕ್ಷ್ಮವಾಗಿ ಎಲ್ಲವನ್ನೂ ನೋಡುತ್ತಿದ್ದೇನೆ. ಒಬ್ಬ ರಾಜಕೀಯ ಮುಖಂಡನಾಗಿ ಎಲ್ಲಿ ತಪ್ಪುತ್ತಿದ್ದೇವೆ. ಪಕ್ಷ ಉಳಿಸಲು ನಾವು ಹೇಗೆ ನಡೆದುಕೊಳ್ಳಬೇಕು. ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ನನ್ನ ಮನದಲ್ಲಿ ತುಂಬಾ ಆತಂಕ ಇದೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು.

Exit mobile version