Site icon PowerTV

ಯುವತಿ ಮೇಲೆ ಆ್ಯಸಿಡ್ ಎರಚಿದ ಕಿರಾತಕ ಕೊನೆಗೂ ಅಂದರ್

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ 23 ವರ್ಷದ ಯುವತಿಯ ಮೇಲೆ ಆ್ಯಸಿಡ್​ ದಾಳಿ ಮಾಡಿದ ಕಿರಾತಕನನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

16 ದಿನಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಆರೋಪಿ ನಾಗೇಶ್ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಜಂಟಿ ಕಾರ್ಯಾಚರಣೆ ನಡೆಸಿ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆದುಕೊಂಡು ಬರುತಿದ್ದಾರೆ.

ಇನ್ನು, ಆರೋಪಿಯನ್ನು ಕೈ ಕಟ್ಟಿ ಸ್ಥಳದಲ್ಲೇ ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿಗೆ ಇಂದೇ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ತನಿಖಾ ತಂಡ ನಿರ್ಧರಿಸಿದೆ. ಹಾಗೂ ಆರೋಪಿಯನ್ನು ತೀವ್ರ ವಿಚಾರಣೆ ನಡೆಸಲು ನ್ಯಾಯಾಧೀಶರ ಅನುಮತಿ ಪಡೆಯಲು ನಿರ್ಣಯಿಸಿದ್ದಾರೆ.

Exit mobile version