Site icon PowerTV

ಮೇ 19ರಂದು SSLC ಫಲಿತಾಂಶ ಪ್ರಕಟ : ಬಿ.ಸಿ. ನಾಗೇಶ್

ಮಡಿಕೇರಿ : ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ‌ ಮಾತನಾಡಿದ ಅವರು, SSLC ಪರೀಕ್ಷೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ. ಇನ್ನೂ ಮೇ 19 ರಂದು SSLC ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಟ್ವೀಟ್​​ ಮಾಡಿದ್ದೆ,  ಆದರೆ ಸಾಲು ಸಾಲು ರಜೆಗಳು ಬಂದ ಕಾರಣ, ಮೌಲ್ಯಮಾಪನ ಕೊಂಚ ವಿಳಂಬವಾಗಿತ್ತು. ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ  ಮಾಹಿತಿ ನೀಡಿದ್ದಾರೆ.

ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ 2022 ನೇ ಸಾಲಿನ SSLC ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ SSLC ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದರು.

Exit mobile version