Site icon PowerTV

ಆ್ಯಸಿಡ್​​ ನಾಗ ಬಂಧನ : ಪೊಲೀಸರ ದಕ್ಷತೆಗೆ ಗೃಹ ಸಚಿವರ ಶಹಬ್ಬಾಸ್

ಬೆಂಗಳೂರು : ಯುವತಿಯ ಮೇಲೆ ಆಸಿಡ್ ಎರಚುವಿಕೆ ಯಂಥ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಕಿರಾತಕ ನಾಗೇಶ್ ಎಂಬ ಆರೋಪಿಯನ್ನು ನಮ್ಮ ಪೊಲೀಸರು, ಅತ್ಯಂತ ಶ್ರಮ ಹಾಗೂ ದಕ್ಷತೆಯಿಂದ ನೆರೆಯ ತಮಿಳುನಾಡು ರಾಜ್ಯದಲ್ಲಿ ಅಡಗಿದ್ದವನನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ್ಯಸಿಡ್​​ ದಾಳಿ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಹೆಡೆಮುರಿ ಕಟ್ಟುವುದರ ಮೂಲಕ ನಮ್ಮ ಪೊಲೀಸರು, ದೇಶದಲ್ಲಿಯೇ, ಅತ್ಯಂತ ದಕ್ಷತೆಯ ಹಾಗೂ ವೃತ್ತಿಪರ ಪಡೆಯೆಂದು, ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತನೆ.

ಇನ್ನು ತಮಿಳುನಾಡು ಪೊಲೀಸರೂ, ಹೀನ ಕೃತ್ಯ ನಡೆಸಿದ ಅಪರಾಧಿಯನ್ನು ಬಂಧಿಸುವ ಕಾರ್ಯದಲ್ಲಿ ನಮ್ಮ ಕರ್ನಾಟಕ ಪೊಲೀಸರಿಗೆ ನೆರವಾಗಿದ್ದಾರೆ ಹೀಗಾಗಿ ಅವರಿಗೂ ನನ್ನ ಅಭಿನಂದನೆಗಳು ಎಂದರು.

ಅಪರಾಧಿಗೆ ಉಗ್ರ ಶಿಕ್ಷೆ ಯಾಗುವಂತೆ, ಅಪರಾಧಿಯನ್ನು, ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ದಲ್ಲಿ
ಆರೋಪಿಯ ವಿಚಾರಣೆ ನಡೆಸಿ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸಲಾಗುತ್ತದೆ. ಆರೋಪಿಗೆ ತಕ್ಕ ಶಿಕ್ಷೆ ಆಗುವ ಮೂಲಕ ಸಂತ್ರಸ್ತ ಮಹಿಳೆಗೆ ಹಾಗೂ ಕುಟುಂಬ ವರ್ಗಕ್ಕೆ ಸ್ವಲ್ಪವಾದರೂ ನೆಮ್ಮದಿ ದೊರಕಿದಂತಾಗುವುದು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಸಂತ್ರಸ್ತ ಮಹಿಳೆ, ಚೇತರಿಸಿಕೊಳ್ಳುತ್ತಿದ್ದು, ಶೀಘ್ರ ಗುಣಮುಖವಾಗಲಿ ಎಂದು, ಪ್ರಾರ್ಥಿಸುತ್ತೇನೆ ಎಂದು ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

Exit mobile version