Site icon PowerTV

ಮೇ 16ರಿಂದ ರಾಜ್ಯಾದ್ಯಂತ ಶಾಲೆ ಆರಂಭ

ಬೆಂಗಳೂರು : ಮೇ 16ರಿಂದ ರಾಜ್ಯದಲ್ಲಿ 1ರಿಂದ 10ನೇ ತರಗತಿವರೆಗಿನ ಎಲ್ಲಾ ಮಕ್ಕಳಿಗೂ ಶಾಲೆಗಳು ಆರಂಭವಾಗಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ತಿಳಿಸಿದೆ.

ರಾಜ್ಯಾದ್ಯಂತ ಶಾಲೆ ಶುರುವಾಗುವ ಹಿನ್ನೆಲೆ ಆರಂಭದ ಮುನ್ನಾದಿನ ಮೇ 15ರಂದೇ ಸಂಪೂರ್ಣ ಶಾಲಾ ಸ್ವಚ್ಛತೆ, ತಳಿರು ತೋರಣದ ಸಿಂಗಾರದೊಂದಿಗೆ ಮಕ್ಕಳನ್ನು ಬರಮಾಡಿಕೊಳ್ಳಲು ಅಗತ್ಯಸಿದ್ಧತೆ ಮಾಡಿಕೊಳ್ಳಲು ಶಿಕ್ಷಕರು, ಇತರೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಮೊದಲ ದಿನ ಮೇ 16ರಂದು ಶಾಲೆ ಪ್ರಾರಂಭೋತ್ಸವದ ದಿನವಾಗಿದ್ದು, ಅಂದಿನಿಂದಲೇ ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟ ಆರಂಭಿಸಬೇಕು. ಹಾಗಾಗಿ ಶಿಕ್ಷಕರು, ಇತರೆ ಸಿಬ್ಬಂದಿ 15ರಂದು ಶಾಲಾ ಸ್ವಚ್ಛತೆ, ಸುರಕ್ಷತೆ ಪರಿಶೀಲನೆ, ಪೂರ್ಣಭಾವಿ ಸಭೆ, ತರಬೇತಿ, ಸಮಾಲೋಚನಾ ಸಭೆಗಳೊಂದಿಗೆ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ಮೇ 16ಕ್ಕೆ ಶಾಲೆ ಪ್ರಾರಂಭೋತ್ಸವ ನಡೆಸಿ ಮಕ್ಕಳನ್ನು ಸ್ವಾಗತಿಸಬೇಕು ಎಂದು ಸೂಚಿಸಲಾಗಿದೆ.

Exit mobile version