Site icon PowerTV

ನಾಳೆಯಿಂದ ಶಾಲಾರಂಭಕ್ಕೆ ಸಿದ್ಧತೆ

ಬೆಂಗಳೂರು: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭವಾಗಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆಯು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮತ್ತೊಂದೆಡೆ, ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ.

ಶಾಲೆಗಳ ಪ್ರಾರಂಭೋತ್ಸವಕ್ಕೆ ಹಬ್ಬದ ರೀತಿ ಸಿದ್ಧತೆ ನಡೆದಿದೆ. ಇದಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಮಕ್ಕಳಲ್ಲಿ ಸ್ಥೈರ್ಯ ತುಂಬಲು ನಿರ್ಧರಿಸಲಾಗಿದೆ. ಶಾಲೆಗಳಲ್ಲಿ ತೋರಣ ಕಟ್ಟಿ, ರಂಗೋಲಿ ಬಿಡಿಸಿ ಮಕ್ಕಳನ್ನು ಸ್ವಾಗತಿಸಬೇಕು. ಹಾಜರಾತಿ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ತರಗತಿ ಮತ್ತು ಶಿಕ್ಷಕರ ವೇಳಾಪಟ್ಟಿ ತಯಾರು ಮಾಡಿಟ್ಟುಕೊಳ್ಳಬೇಕು. ಇದಕ್ಕಾಗಿ ಶಿಕ್ಷಕರು ಮತ್ತು ಸಂಬಂಧಪಟ್ಟಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.

Exit mobile version