Friday, August 29, 2025
HomeUncategorizedಭೀಕರ ಮಳೆಗೆ ತತ್ತರಿಸಿದ ಅಸ್ಸಾಂ

ಭೀಕರ ಮಳೆಗೆ ತತ್ತರಿಸಿದ ಅಸ್ಸಾಂ

ಅಸ್ಸಾಂ : ಭಾರೀ ಮಳೆಗೆ ಅಸ್ಸಾಂ ತತ್ತರಗೊಂಡಿದೆ. ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ಬಿಡುವು ಕೊಟ್ಟಿಲ್ಲ. ಇನ್ನು, ಪ್ರವಾಹಕ್ಕೆ ರೈಲು ಸಿಕ್ಕಿಹಾಕಿಕೊಂಡು ಪ್ರಯಾಣಿಕರು ಪರದಾಡಿದ್ರು ಅವರನ್ನು ಭಾರತೀಯ ವಾಯುಪಡೆ ರಕ್ಷಿಸಿದೆ.

ಸಿಲ್ಚಾರ್-ಗುವಾಹಟಿ ಎಕ್ಸ್‌ಪ್ರೆಸ್‌ನ 119 ಪ್ರಯಾಣಿಕರನ್ನು ಐಎಎಫ್ ಪಡೆ ರಕ್ಷಿಸಿದೆ. ಸಿಲ್ಚಾರ್-ಗುವಾಹಟಿ ರೈಲು ಕ್ಯಾಚಾರ್ ಪ್ರದೇಶದಲ್ಲಿ ಮಳೆಯಿಂದಾಗಿ ಸಿಲುಕಿಕೊಂಡಿತ್ತು. ಪ್ರವಾಹದ ನೀರಿನಿಂದ ರೈಲು ಮುಂದಕ್ಕೆ ಅಥವಾ ಹಿಂದಕ್ಕೆ ಚಲಿಸಲು ಸಾಧ್ಯವಾಗಲಿಲ್ಲ. ಹಲವಾರು ಗಂಟೆಗಳ ಕಾಲ ರೈಲು ಸಿಕ್ಕಿಹಾಕಿಕೊಂಡ ಪರಿಣಾಮ ಜಿಲ್ಲಾಡಳಿತ ಭಾರತೀಯ ವಾಯುಪಡೆಯ ಸಹಾಯದಿಂದ 119 ಜನರನ್ನು ರಕ್ಷಿಸಿತು. ಅಸ್ಸಾಂ ಹಠಾತ್ ಪ್ರವಾಹದಿಂದಾಗಿ ಹಲವಾರು ಸ್ಥಳಗಳಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಆಸ್ತಿ-ಪಾಸ್ತಿ ಹಾನಿಗೊಳಗಾಗಿದೆ. ಇದರಿಂದಾಗಿ ರಾಜ್ಯದ ಇತರ ಭಾಗಗಳಿಂದ ರೈಲು ಮತ್ತು ರಸ್ತೆ ಸಂಪರ್ಕಗಳನ್ನು ಬಂದ್ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular

Recent Comments