Monday, August 25, 2025
Google search engine
HomeUncategorizedಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಅಧಿಕೃತವಾಗಿ ಬಸವರಾಜ ಹೊರಟ್ಟಿ  ರಾಜೀನಾಮೆ ಘೋಷಣೆ ಮಾಡಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದರು. ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿದ ಹೊರಟ್ಟಿ ನಾಳೆ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದರು.

ವಿಧಾನ ಪರಿಷತ್ ಸಚಿವಾಲಯದ ಆಡಳಿತದಲ್ಲಿ ಪ್ರಾಮಾಣಿಕ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇನೆ. ಕಲುಷಿತವಾದ ರಾಜಕಾರಣದಲ್ಲಿ ನಮ್ಮಂತವರಿಗೆ ನೋವು ಆಗಿದೆ. ಆದರೆ ಮನಸ್ಸು ಇಲ್ಲದೆ ಇದ್ದರೂ ರಾಜಕೀಯದಲ್ಲಿ ಇರಬೇಕಾಗುತ್ತೆ ಎಂದರು. ಇನ್ನು,ಬಿಜೆಪಿ ಸೇರ್ಪಡೆ ಸಂಬಂಧಿಸಿದಂತೆ ಯಾವುದೇ ಷರತ್ತು ಹಾಕಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಭೇಟಿ ಸಂದರ್ಭದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

ಸಭಾಪತಿಯಾಗಿ 30 ಸಭೆಯನ್ನು ‌ಮಾಡಿದ್ದೇನೆ. ಹೊಸದಾಗಿ ಬಂದ ಶಾಸಕರಿಗೆ ಟ್ರೈನಿಂಗ್ ಕೂಡ ಕೊಟ್ಟಿದ್ದೇನೆ.ಸದನವನ್ನು ಈ ಭಾರಿ 95% ಅಜೆಂಡಾ ಪ್ರಕಾರ ಆಗಿದೆ. ರಾಜ್ಯ ಸಭಾ ಮಾದರಿಯಲ್ಲಿ ಜೀರೋ ಅವರ್, ಪ್ರಶ್ನೊತ್ತರ ಕಲಾಪ ಮಾಡಲಾಗಿದೆ. ಪ್ರಜಾಪ್ರಭುತ್ವ ಮೇಲೆ ಶಿಮ್ಲಾದಲ್ಲಿ ಸೆಮಿನಾರ್ ಇತ್ತು ಅದಕ್ಕೂ ಭಾಗಿಯಾಗಿದ್ದೇನೆ ಎಂದರು.

RELATED ARTICLES
- Advertisment -
Google search engine

Most Popular

Recent Comments