Site icon PowerTV

ಬೆಂಗಳೂರಿಗೆ ನೂತನ ಪೊಲೀಸ್ ಕಮಿಷನರ್ ನೇಮಕ

ಬೆಂಗಳೂರು :ಬೆಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಕಮಲ್‌ಪಂತ್ ನೇಮಕಾತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಹೊಂದಿದ್ದು, ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದ ಸಿ. ಹೆಚ್. ಪ್ರತಾಪ್ ರೆಡ್ಡಿ ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿದ್ದಾರೆ. ಹಾಗೂ ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂಥ್ ಡಿಜಿಪಿ ನೇಮಕಾತಿ ವಿಭಾಗಕ್ಕೆ ವರ್ಗಾವಣೆ ಆಗಿದ್ದಾರೆ.

ವಿಶೇಷ ರಿಸರ್ವ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಡೈರೆಕ್ಟರ್ ಜೆನೆರಲ್ ಆಫ್‌ ಪೊಲೀಸ್‌ ಮತ್ತು ಇನ್ಸ್‌ಪೆಕ್ಟರ ಜೆನೆರಲ್ ಎಡಿಜಿಪಿ ಆಗಿದ್ದ ಅಲೋಕ್‌ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಪ್ರಭಾರ್ ಆಗಿದ್ದ ಆರ್. ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ ಮತ್ತು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್.ಅನುಚೇತ್ ಅವರನ್ನು ಸಿಐಡಿಗೆ ವರ್ಗಯಿಸಲಾಗಿದೆ.

ಇನ್ನು ಬೆಂಗಳೂರು ನಗರಕ್ಕೆ ನೂತನ ಪೊಲೀಸ್ ಆಯುಕ್ತರಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಕಾನೂನು ಸುವ್ಯವಸ್ಥೆಯ ಎಡಿಜಿಪಿಯಾಗಿದ್ದರು. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಹೆಸರನ್ನು ಮಾಡಿರುವ ಸಿ. ಹೆಚ್. ಪ್ರತಾಪ್ ರೆಡ್ಡಿಯವರು ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

Exit mobile version