Site icon PowerTV

ಮಂಗಳಮುಖಿ ನಟಿ ಶೆರಿನ್ ಆತ್ಮಹತ್ಯೆ

ಕೊಚ್ಚಿ: ನಟಿ, ರೂಪದರ್ಶಿಯಾಗಿ ಗುರುತಿಸಿಕೊಂಡಿದ್ದ ಮಂಗಳಮುಖಿ ಶೆರಿನ್ ಸೆಲಿನ್ ಮ್ಯಾಥ್ಯೂ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೊಚ್ಚಿಯ ಚಕ್ಕರಪರಂಬು ಪ್ರದೇಶದಲ್ಲಿರುವ ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದುಕೊಂಡು ಶೆರಿನ್ ಮೃತಪಟ್ಟಿದ್ದಾರೆ. ಶೆರಿನ್ ಸಾವಿಗೆ ಮಾಡೆಲಿಂಗ್ ಕ್ಷೇತ್ರದ ಸೆಲೆಬ್ರಿಟಿಗಳು, ಆಪ್ತರು ಆಘಾತ ವ್ಯಕ್ತಪಡಿಸಿದ್ದಾರೆ.

26 ವರ್ಷ ವಯಸ್ಸಿನ ಶೆರಿನ್ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಮೊದಲಿಗೆ ನೋಡಿದ ಆಕೆಯ ರೂಂಮೇಟ್, ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಆಳಪ್ಪುಳ ಜಿಲ್ಲೆ ಮೂಲದ ಶೆರಿನ್ ಕಳೆದ ಹಲವು ವರ್ಷಗಳಿಂದ ಕೊಚ್ಚಿಯಲ್ಲಿ ನೆಲೆಸಿದ್ದರು. ಪ್ರಾಥಮಿಕ ತನಿಖೆ ಬಳಿಕ ಮಾನಸಿಕ ಒತ್ತಡ ಎದುರಿಸಲಾಗದೆ ಆಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಈ ಕುರಿತಂತೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಚಕ್ಕರಪರಂಬು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Exit mobile version