Site icon PowerTV

ಮತ್ತೊಂದು ದಿಟ್ಟ ಹೆಜ್ಜೆ ಇಟ್ಟ ಯೋಗಿ ಸರ್ಕಾರ

ಅನಧಿಕೃತ ಮಸೀದಿಗಳ ವಿರುದ್ಧ ಸಮರ ಸಾರಿದ್ದ ಯೋಗಿ ಸರ್ಕಾರ ಮತ್ತೊಂದು ದಿಟ್ಟ ಹೆಜ್ಜೆ ಇಟ್ಟಿದೆ. ಉತ್ತರ ಪ್ರದೇಶದಲ್ಲಿ ಹೊಸ ಮದರಸಾಗಳನ್ನು ಅನುದಾನ ಪಟ್ಟಿಯಿಂದ ಹೊರಗಿಡುವ ಪ್ರಸ್ತಾಪಕ್ಕೆ ಯೋಗಿ ಆದಿತ್ಯನಾಥ್ ನೇತೃತ್ವದ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಖಿಲೇಶ್ ಯಾದವ್ ಸರ್ಕಾರದ ನೀತಿಗೆ ಅಂತ್ಯ ಹಾಡಿದ್ದಾರೆ.

ಹೊಸ ಮದರಸಾಗಳು ಯಾವುದೇ ಅನುದಾನವನ್ನು ಪಡೆಯುವುದಿಲ್ಲ ಎಂದು ಹೇಳಿದೆ. ಉತ್ತರ ಪ್ರದೇಶ ಸರ್ಕಾರ ಕಳೆದ ಬಾರಿ ತನ್ನ ಕೊನೆಯ ಬಜೆಟ್​ನಲ್ಲಿ, ಮದರಸಾ ಆಧುನೀಕರಣ ಯೋಜನೆಯಡಿಯಲ್ಲಿ 479 ಕೋಟಿ ರೂಪಾಯಿ ವಿನಿಯೋಗಿಸಿತ್ತು. ರಾಜ್ಯದಲ್ಲಿ ಒಟ್ಟು 16 ಸಾವಿರ ನೋಂದಾಯಿತ ಮದರಸಾಗಳ 558 ಸಂಸ್ಥೆಗಳಿಗೆ ಹಣವನ್ನು ಮಂಜೂರು ಮಾಡಿದೆ. ಇನ್ನು, ಮದರಸಾಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತರಗತಿಗಳನ್ನು ಪ್ರಾರಂಭಿಸುವ ಮೊದಲು ರಾಷ್ಟ್ರಗೀತೆಯನ್ನು ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

Exit mobile version