Monday, August 25, 2025
Google search engine
HomeUncategorizedನಾವು ವಿವೇಕಾನಂದರ ವಂಶಸ್ಥರು ಮೊಘಲರ ವಂಶಸ್ಥರಲ್ಲ : ಸುನೀಲ್ ಕುಮಾರ್

ನಾವು ವಿವೇಕಾನಂದರ ವಂಶಸ್ಥರು ಮೊಘಲರ ವಂಶಸ್ಥರಲ್ಲ : ಸುನೀಲ್ ಕುಮಾರ್

ಬೆಂಗಳೂರು : ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ. ಯಾವ ತಪ್ಪನ್ನು ಕಾಂಗ್ರೆಸ್ ಮಾಡಿತ್ತೋ ಅದನ್ನು ಸರಿಪಡಿಸುವ ಕೆಲಸ ನಾವು ಮಾಡುತ್ತಿದ್ದೇವೆ ಎಂದು  ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾರಾಯಣ ಗುರು ಕುರಿತು ಹಾಗೂ ಅವರ ಆದರ್ಶಗಳನ್ನು ಪಠ್ಯ ಪುಸ್ತಕದಿಂದ ನಮ್ಮ ಸರ್ಕಾರವು ತೆಗೆದು ಹಾಕಿಲ್ಲ. ಪಠ್ಯಪುಸ್ತಕ ಪರಿಷ್ಕರಣೆಯ ವಿವಾದದಿಂದಾಗಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಲೆ ತಗ್ಗಿಸುವಂತಾಗಿದೆ. ಪಠ್ಯಪುಸ್ತಕ ಪರಿಷ್ಕರಣೆಯಂತಹ ಗಂಭೀರ ಕಾರ್ಯವನ್ನು ನಾಡಿನ ಹಿರಿಯ ಲೇಖಕರು, ಸಮಾಜ ಸುಧಾರಕರನ್ನು ಅವಹೇಳನ ಮಾಡುತ್ತಾ ಬಂದಿರುವ ಅನರ್ಹ, ಪೂರ್ವಾಗ್ರಹ ಪೀಡಿತ ವ್ಯಕ್ತಿಯಿಂದ ಮಾಡಿಸಿರುವುದೇ ನಾಡು-ನುಡಿಗೆ ಬಗೆದಿರುವ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು.

ಸದ್ಯ ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸುನಿಲ್ ಕುಮಾರ್ ಅವರು, ನಾರಾಯಣ ಗುರು ಕುರಿತು ಹಾಗೂ ಅವರ ಆದರ್ಶಗಳನ್ನು ಪಠ್ಯ ಪುಸ್ತಕದಿಂದ ನಮ್ಮ ಸರ್ಕಾರವು ತೆಗೆದು ಹಾಕಿಲ್ಲ. ನಾರಾಯಣ ಗುರುಗಳ ಬಗ್ಗೆ ನಮ್ಮ ಸರ್ಕಾರಕ್ಕೆ ಶ್ರದ್ದೆ, ಭಕ್ತಿ ಇದೆ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ವಿನಾಕಾರಣ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ಹರಡುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪದೇ ಪದೇ ನಾರಾಯಣ ಗುರುಗಳ ವಿಷಯವನ್ನು ರಾಜಕೀಯಕ್ಕೆ ಎಳೆದು ತರುವುದು ಶೋಭೆ ತರುವಂತದ್ದಲ್ಲ. ಬಲವಂತದ ಮತಾಂತರ ನಿಷೇಧ ಕಾಯ್ದೆಯ ಸುಗ್ರೀವಾಜ್ಞೆಗೆ ಘನತೆವೆತ್ತ ರಾಜ್ಯಪಾಲರ ಅಂಕಿತ ದೊರೆತಿದೆ. ಇನ್ನು ಮುಂದೆ ರಾಜ್ಯದಲ್ಲಿ ಬಲವಂತದ, ಆಸೆ, ಆಮಿಷಗಳ ಮೂಲಕ ನಡೆಯುತ್ತಿದ್ದ ಮತಾಂತರಗಳಿಗೆ ಸಂಪೂರ್ಣ ಕಡಿವಾಣ ಬೀಳಲಿದೆ ಎಂದಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments