Saturday, August 23, 2025
Google search engine
HomeUncategorizedಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕ್ರಮ

ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಪರೀಕ್ಷೆ ನಡೆಸಲಾಯಿತು.ಶನಿವಾರ ಪ್ರಶ್ನೆ ಪತ್ರಿಕೆ 1 ಮುಗಿದಿದ್ದು, ಭಾನುವಾರ ಮತ್ತೊಂದು ಪರೀಕ್ಷೆ ನಡೆಯಲಿದೆ. 6ರಿಂದ 8ನೇ ತರಗತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ರಾಜ್ಯದ 435 ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದ್ರು. ಅದ್ರಲ್ಲಿ ಬೆಂಗಳೂರಿನಲ್ಲಿ ಸುಮಾರು 15 ಕೇಂದ್ರಗಳನ್ನು ನಿಗದಿ ಮಾಡಲಾಗಿತ್ತು.

ರಾಜ್ಯದಲ್ಲಿ ಇತ್ತೀಚಿನ ಪಿಎಸ್‌ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಂತಹ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಭಾರೀ ಬಿಗಿ ಭದ್ರತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿತ್ತು. ಪ್ರತಿ ಜಿಲ್ಲೆಯಲ್ಲೂ ಕೂಡ ಯಾವುದೇ ಅಕ್ರಮಗಳಿಗೆ ಅವಕಾಶ ನೀಡದೆ ಸುಸೂತ್ರವಾಗಿ ಪರೀಕ್ಷೆ ನಡೆಸುವ ಹೊಣೆಯನ್ನು ಆಯಾ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದ ತ್ರಿಸದಸ್ಯ ಸಮಿತಿಗೆ ವಹಿಸಲಾಗಿದೆ. ಇದಕ್ಕೆ ಅಭ್ಯರ್ಥಿಗಳು ಕೂಡ ಫುಲ್ ಖುಷಿಯಾಗಿ ಪ್ರಾಮಾಣಿಕವಾಗಿ ಕಷ್ಟ ಪಟ್ಟು ಓದಿದವರಿಗೆ ಸರ್ಕಾರಿ ಕೆಲಸ ಸಿಗಲಿ . ಪರೀಕ್ಷೆ ಪಾರದರ್ಶಕತೆಯಿಂದ ನಡೆಯಬೇಕು ಎಂದರು.

15 ಸಾವಿರ ಹುದ್ದೆಗಳಿಗೆ ನಡೆಯುವ ಪರೀಕ್ಷೆಗೆ ಒಟ್ಟು 1.05 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಅಭ್ಯರ್ಥಿಗಳು ಮೊಬೈಲ್‌ ಫೋನ್‌, ಬ್ಲೂಟೂತ್‌, ಕ್ಯಾಲ್ಕು್ಲೇಟರ್‌, ಕೈಗಡಿಯಾರ ಸೇರಿ ಯಾವುದೇ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಪರೀಕ್ಷಾ ಕೇಂದ್ರಕ್ಕೆ ತರದಂತೆ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿತ್ತು.

ಒಟ್ಟಿನಲ್ಲಿ PSI ಅಕ್ರಮದಿಂದ ಎಚ್ಛೆತ್ತುಕೊಂಡಿದ್ದು, ಯಾವುದೇ ಅಕ್ರಮ, ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ನಡೆಸಿದೆ.ಭಾನುವಾರ ಕೂಡ ಪರೀಕ್ಷೆ ಇದೆ.

RELATED ARTICLES
- Advertisment -
Google search engine

Most Popular

Recent Comments