Monday, August 25, 2025
Google search engine
HomeUncategorizedಕಬಡ್ಡಿ ವಿಶ್ವಕಪ್ ಹೀರೋ ಉದಯ್ ಚೌಟ ನಿಧನ

ಕಬಡ್ಡಿ ವಿಶ್ವಕಪ್ ಹೀರೋ ಉದಯ್ ಚೌಟ ನಿಧನ

ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಕಬಡ್ಡಿ ತಂಡವು ಚಾಂಪಿಯನ್ ಆಗುವಲ್ಲಿ ಮಹತ್ವದ ಪಾತ್ರವಹಿಸಿದ್ದ ಅಂತಾರಾಷ್ಟ್ರೀಯ ಆಟಗಾರ ಕರ್ನಾಟಕದ ಪ್ರತಿಭಾನ್ವಿತ ಕಬಡ್ಡಿ ಪಟು ಉದಯ್ ಚೌಟ ಇಂದು ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೆದುಳು ರಕ್ತಸ್ರಾವದಿಂದ ಕೊನೆಯುಸಿರೆಳೆದಿದ್ದಾರೆ. ಉದಯ್ ಚೌಟ ಅವರು ತಾಯಿ, ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಏಕಲವ್ಯ ಪ್ರಶಸ್ತಿ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಕಬಡ್ಡಿ ಪಟು ಎನ್ನುವ ಹಿರಿಮೆಗೆ ಪಾತ್ರರಾಗಿದ್ದ ಉದಯ್ ಚೌಟ, 2007ರಲ್ಲಿ ನಡೆದ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುಮೋಘ ಪ್ರದರ್ಶನ ತೋರುವ ಮೂಲಕ ಭಾರತ ತಂಡವು ಚಾಂಪಿಯನ್ ಆಗುವಲ್ಲಿ ಮಹತ್ತರ ಪಾತ್ರವನ್ನು ವಹಿಸಿದ್ದರು.

ಉದಯ್ ಚೌಟ, ಭಾರತ ತಂಡದ ಪರ ಅತ್ಯುತ್ತಮ ಪ್ರದರ್ಶನ ತೋರಿದ ಆಟಗಾರ ಎನ್ನುವ ಪ್ರಶಸ್ತಿಗೂ ಪಾತ್ರರಾಗಿದ್ದರು. ಕಳೆದೆರಡು ದಶಕಗಳಿಂದ ಕ್ರೀಡಾ ವೃತ್ತಿಜೀವನದಲ್ಲಿ ಉದಯ್ ಚೌಟ, ನೂರಕ್ಕೂ ಹೆಚ್ಚು ರಾಷ್ಟ್ರೀಯ ಹಾಗೂ 300ಕ್ಕೂ ಹೆಚ್ಚು ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಗಳನ್ನು ಆಡಿದ್ದರು.

RELATED ARTICLES
- Advertisment -
Google search engine

Most Popular

Recent Comments