Site icon PowerTV

ನಮಗೆ ಯಾವತ್ತಿಗೂ ಜನರೇ ಮೊದಲು : ಪೆಟ್ರೋಲ್ ,ಡೀಸೆಲ್ ಬೆಲೆ ಇಳಿಕೆ ಬಗ್ಗೆ ಮೋದಿ ಪ್ರತಿಕ್ರಿಯೆ

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಕೆ ನಿರ್ಧಾರಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮಗೆ ಜನರೇ ಮೊದಲು ಎಂದು ಹೇಳಿದ್ದಾರೆ.

ನಮಗೆ ಯಾವತ್ತಿಗೂ ಜನರೇ ಮೊದಲು! ಇಂದಿನ ನಿರ್ಧಾರಗಳು, ವಿಶೇಷವಾಗಿ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆಯು ಅನೇಕ ಕ್ಷೇತ್ರಗಳ ಮೇಲೆ ಪರಿಣಾಮ ಬೀರಲಿದೆ. ನಮ್ಮ ನಾಗರಿಕರಿಗೆ ರಿಲೀಫ್ ದೊರೆಯಲಿದ್ದು, ಜೀವನ ನಿರ್ವಹಣೆ ಸುಗಮವಾಗಲಿದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಉಜ್ವಲ ಯೋಜನೆಯಿಂದ ಕೋಟ್ಯಂತರ ಭಾರತೀಯರಿಗೆ, ವಿಶೇಷವಾಗಿ ಮಹಿಳೆಯರಿಗೆ ನೆರವಾಗಿದೆ. ಉಜ್ವಲ ಯೋಜನೆಗೆ ಸಬ್ಸಿಡಿ ನೀಡುವ ಇಂದಿನ ನಿರ್ಧಾರವು ಕುಟುಂಬಗಳಿಗೆ ನೆರವಾಗಲಿದೆ ಎಂದು ಮತ್ತೊಂದು ಟ್ವೀಟ್​ನಲ್ಲಿ ಪ್ರಧಾನಿ ಉಲ್ಲೇಖಿಸಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕ್ರಮವಾಗಿ ₹8 ಹಾಗೂ ₹6ರಷ್ಟು ಕಡಿತ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹9.5, ಡೀಸೆಲ್ ಬೆಲೆ ₹7 ರಷ್ಟು ಇಳಿಕೆಯಾಗಲಿದೆ. ಉಜ್ವಲ ಯೋಜನೆ ಫಲಾನುಭವಿಗಳಿಗೆ ವರ್ಷಕ್ಕೆ 12 ಸಿಲಿಂಡರ್ಗಳ ವರೆಗೆ ₹200ರಂತೆ ಸಬ್ಸಿಡಿ ನೀಡುವುದಾಗಿಯೂ ಅವರು ಘೋಷಿಸಿದ್ದಾರೆ.

Exit mobile version