Site icon PowerTV

ಮಾನ್ಸೂನ್ ಪೂರ್ವ ಮಳೆ​ ಅಬ್ಬರ: ಸಚಿವ, ಅಧಿಕಾರಿಗಳೊಟ್ಟಿಗೆ ಸಿಎಂ ಮಹತ್ವದ ಸಭೆ

ಬೆಂಗಳೂರು: ರಾಜ್ಯದ ಮಳೆಯ ಪರಿಸ್ಥಿತಿಯ ಅವಲೋಕನದ ಬಗ್ಗೆ ರಾಜ್ಯದ ಎಲ್ಲಾ ಡಿಸಿಗಳು, ಎಸ್ಪಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾರ್ಯದರ್ಶಿಗಳ ಜೊತೆ ಸಿಎಂ ಸಭೆ ನಡೆಸಿದ್ದಾರೆ.

ಮಾನ್ಸೂನ್ ಪೂರ್ವಕ್ಕೂ ಮುನ್ನ ರಾಜ್ಯದಲ್ಲಿ ಮಳೆ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಿಂದ ವೀಡಿಯೋ ಕಾನ್ಪೆರೆನ್ಸ್ ಮೂಲಕ ಸಿಎಂ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ವಸತಿ ಸಚಿವ ವಿ ಸೋಮಣ್ಣ, ಇಂಧನ ಸಚಿವ ಸುನಿಲ್ ಕುಮಾರ್ ವೀಡಿಯೋ ಕಾನ್ಪೆರೆನ್ಸ್ ಮೂಲಕ ರಾಜ್ಯದ ಮಳೆಯ ಸ್ಥಿತಿಗತಿ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

ಅದುವಲ್ಲದೇ, ಜಿಲ್ಲೆಗಳಲ್ಲಿ ಸರಿಯುತ್ತಿರುವ ಮಳೆ, ಮಳೆಯಿಂದ ಆಗಿರುವ ಹಾನಿ, ಹಾನಿಗೆ ಕೈಗೊಂಡ ಪರಿಹಾರ ಕಾರ್ಯಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಅಲ್ಲದೇ ಬೇರೆ ರಾಜ್ಯಗಳಲ್ಲಿ ಸರಿಯುತ್ತಿರುವ ಮಳೆ, ಮುಂದಿನ ಮುಂಗಾರು ಮಳೆಗೆ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಸಮಾಲೋಚನೆ ಮಾಡಿದ್ದಾರೆ.

Exit mobile version