Site icon PowerTV

ಪರಿಷತ್​ಗೆ ಟಿಕೆಟ್ ನೀಡುವ ಬಗ್ಗೆ ನನಗೆ ಐಡಿಯಾ ಇಲ್ಲ : ಎಸ್.ಆರ್‌.ಪಾಟೀಲ್

ಬೆಂಗಳೂರು: ಪರಿಷತ್​ಗೆ ಟಿಕೆಟ್ ನೀಡುವ ಬಗ್ಗೆ ನನಗೆ ಐಡಿಯಾ ಇಲ್ಲ ಪಕ್ಷದ ನಾಯಕಿ ಸೋನಿಯಾ ಗಾಂಧಿ ನಿರ್ಣಯ ತೆಗೆದುಕೊಳ್ತಾರೆ ಎಂದು ಕಾಂಗ್ರೆಸ್ ನಾಯಕ ಎಸ್.ಆರ್‌.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ ಪಕ್ಷ ಅವಕಾಶ ಕಲ್ಪಿಸಿದರೆ ಬದ್ದತೆ, ನಿಷ್ಠೆಯಿಂದ ಕೆಲಸ ಮಾಡ್ತೀನಿ. ಪಕ್ಷದ ನಿರ್ಣಯಕ್ಕೆ ತಾಯಿ ಸಮಾನ ಅಂತ ಗೌರವಿಸಿದ್ದೀನಿ ಎಂದರು.

ಅದುವಲ್ಲದೇ, ಪಕ್ಷ ನನಗೆ ಬಹಳಷ್ಟು ಅವಕಾಶ ಕಲ್ಪಿಸಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ, ಮಂತ್ರಿಯಾಗಿದ್ದೀನಿ. 24 ವರ್ಷಗಳ ಕಾಲ ಮೇಲ್ಮನೆ ಸದಸ್ಯನಾಗಿದ್ದೀನಿ. ಪಕ್ಷದ ಬಗ್ಗ ಅಪಾರವಾದ ಗೌರವವಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರು ಆಗಾಗ ಭೇಟಿ ಆಗ್ತಾ ಇರ್ತೀನಿ. ಟಿಕೆಟ್ ಬಗ್ಗೆ ಸಿದ್ದರಾಮಯ್ಯ ಜೊತೆ ನಾನು ಚರ್ಚೆ ಮಾಡಿಲ್ಲ. ನಾನು ಲಾಬಿ ಮಾಡಲ್ಲ ಅದು ಪಕ್ಷಕ್ಕೆ ಬಿಟ್ಟಿದ್ದು ಎಂದು ಹೇಳಿದರು.

Exit mobile version