Site icon PowerTV

ಟೆಕ್ಸಾಸ್ ಪ್ರಾಥಮಿಕ ಶಾಲೆಯಲ್ಲಿ ಭೀಕರ ಶೂಟೌಟ್: 19 ಮಕ್ಕಳು ಸೇರಿ 21 ಮಂದಿ ಸಾವು

ನ್ಯೂಯಾರ್ಕ್​ : ಟೆಕ್ಸಾಸ್‌ನ ಉವಾಲ್ಡೆ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 19 ಮಕ್ಕಳು ಸೇರಿ 21 ಮಂದಿ ಸಾವನ್ನಪ್ಪಿದ್ದಾರೆ.

2012ರಲ್ಲಿ ಕನೆಕ್ಟಿಕಟ್‌ನ ನ್ಯೂಟೌನ್‌ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದ ದಾಳಿ ನಂತರ ಎಲಿಮೆಂಟ್ರಿ ಶಾಲೆಯೊಂದರಲ್ಲಿ ನಡೆದ ಅತಿ ಭೀಕರ ದಾಳಿ ನಡೆದಿದೆ ಎಂದು ‘ಇಂಟರ್‌ನ್ಯಾಷನಲ್ ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ. ಹಾಗೆನೇ ದಾಳಿಕೋರನನ್ನು ಪೊಲೀಸರು ಹತ್ಯೆ ಮಾಡಿದ್ದಾರೆ ಎಂದು ಟೆಕ್ಸಾಸ್ ಗವರ್ನರ್ ಗ್ರೆಗ್ ಅಬಾಟ್ ತಿಳಿಸಿದ್ದಾರೆ.

ದಾಳಿಕೋರ 18 ವರ್ಷ ವಯಸ್ಸಿನವನಾಗಿದ್ದು, ಸಮೀಪದ ಪ್ರೌಢಶಾಲೆ ವಿದ್ಯಾರ್ಥಿ ಎಂದೂ ಅವರು ಮಾಹಿತಿ ನೀಡಿದ್ದಾರೆ. ವಾಹನದಲ್ಲಿ ಬಂದ ದಾಳಿಕೋರ ಪ್ರಾಥಮಿಕ ಶಾಲೆಗೆ ನುಗ್ಗಿ ಗುಂಡಿನ ದಾಳಿ ಆರಂಭಿಸಿದ್ದು, ಭೀಕರವಾಗಿ ಹತ್ಯೆ ಮಾಡಿದ್ದಾನೆ ಎಂದು ಅವರು ಹೇಳಿದ್ದಾರೆ. ‘ಶಾಲೆಗೆ ತೆರಳುವುದಕ್ಕೂ ಮುನ್ನ ದಾಳಿಕೋರ ಆತನ ಅಜ್ಜಿಯ ಮೇಲೂ ದಾಳಿ ನಡೆಸಿದ್ದ ಎನ್ನಲಾಗಿದೆ. ಆದರೆ, ಈ ಎರಡು ದಾಳಿಗಳಿಗೆ ಸಂಬಂಧವಿದೆಯೇ ಎಂಬ ಕುರಿತು ಮಾಹಿತಿ ಇಲ್ಲ’ ಎಂದು ಗವರ್ನರ್ ತಿಳಿಸಿದ್ದಾರೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನೆಲ್ಲ ಸಮೀಪದ ಉವಾಲ್ಡೆ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Exit mobile version