Site icon PowerTV

ಅಮ್ರಿನ್ ಭಟ್‌ ಹತ್ಯೆಗೈದಿದ್ದ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳ ಸೌರಾ ಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಡೆದ ದಾಳಿ ವೇಳೆ ಕಾಶ್ಮೀರ ಪೊಲೀಸರು ನಾಲ್ವರು LET ಉಗ್ರರನ್ನು ಹತ್ಯಗೈದ ಘಟನೆ ನಡೆದಿದೆ.

ಹತ್ಯೆಯಾದ LET ಉಗ್ರರನ್ನು ಶಾಕಿರ್ ಅಹ್ಮದ್ ವಾಜಾ ಮತ್ತು ಅಫ್ರೀನ್ ಅಫ್ತಾಬ್ ಮಲಿಕ್ ಎಂದು ಗುರುತಿಸಲಾಗಿದ್ದು, ಇಬ್ಬರೂ ಟ್ರೆಂಜ್ ಶೋಪಿಯಾನ್ ಗ್ರಾಮದ ನಿವಾಸಿಗಳಾಗಿದ್ದರು. 4 ಉಗ್ರರ ಹತ್ಯೆಯಲ್ಲಿ, ಇಬ್ಬರು ಕಿರುತೆರೆ ನಟಿಯ ಹತ್ಯೆಯಲ್ಲಿ ಭಾಗಿಯಾಗಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಅವರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಒಂದು AK-47 ಮತ್ತು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಕಳೆದ ಮೂರು ದಿನಗಳಲ್ಲಿ ನಡೆದ ಎನ್‍ಕೌಂಟರ್‌ಗಳಲ್ಲಿ ಒಟ್ಟು 10 ಉಗ್ರರನ್ನು ಹತ್ಯೆ ಮಾಡಲಾಗಿದೆ.

Exit mobile version