Tuesday, September 9, 2025
HomeUncategorizedಶೀಘ್ರವೇ ‘ಭೂ ಪರಿವರ್ತನೆ ಕಾಯ್ದೆ’ ತಿದ್ದುಪಡಿ : ಆರ್. ಅಶೋಕ್

ಶೀಘ್ರವೇ ‘ಭೂ ಪರಿವರ್ತನೆ ಕಾಯ್ದೆ’ ತಿದ್ದುಪಡಿ : ಆರ್. ಅಶೋಕ್

ಬೀದರ್: ರಾಜ್ಯದಲ್ಲಿ ಶೀಘ್ರವೇ ಭೂ ಪರಿವರ್ತನೆ ಕಾಯ್ದೆ ತಿದ್ದುಪಡಿ ಮಾಡಿ ಜಾರಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ.

ಬೀದರ್ ಜಿಲ್ಲೆಯ ವಡಗಾಂವ ದೇಶಮುಖ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಂದಾಯ ಇಲಾಖೆಯ ಕಾಯ್ದೆಗಳನ್ನು ಸರಳೀಕರಣಗೊಳಿಸುವ ಪ್ರಕ್ರಿಯೆ ನಡೆಸುತ್ತಿದ್ದು, ಈಗಾಗಲೇ ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆ ನೀಡುತ್ತಿದೆ.

ಅಲ್ಲದೇ ಸ್ವಯಂ ಪೋಡಿ (11ಇ ಸ್ಕೆಚ್) ಕಾನೂನು ಸರಳೀಕರಣ ಮಾಡಿದಂತೆ ಕೃಷಿಯೇತರ ಜಮೀನಿಗೆ ಅರ್ಜಿ ಸಲ್ಲಿಸುವವರು ಅಧಿಕಾರಿಗಳ ಅನುಮೋದನೆಗಾಗಿ ವರ್ಷಗಟ್ಟಲೆ ಕಾಯುವ ವ್ಯವಸ್ಥೆ ಮುಕ್ತಗೊಳಿಸಲು ಯೋಜನೆ ಜಾರಿಗೆ ತರಲಾಗುವುದು ಎಂದರು.

RELATED ARTICLES
- Advertisment -
Google search engine

Most Popular

Recent Comments