Site icon PowerTV

ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ ಜಾರಿ

ಹೊಸದಿಲ್ಲಿ: ನ್ಯಾಷನಲ್ ಹೆರಾಲ್ಡ್ ಕುರಿತ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆಜೂನ್ 8 ರಂದು ತನ್ನ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇಡಿ) ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಲಾಗಿದೆ.

ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರು, ಇಂದು ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ್ದು, “ಸೋನಿಯಾ ಗಾಂಧಿ ಅವರು ತಮಗೆ ಸೂಚಿಸಿದ ದಿನಾಂಕದಂದು ಅಗತ್ಯವಿದ್ದಲ್ಲಿ ಹಾಜರಾಗುತ್ತಾರೆ ಆದರೆ ಪಕ್ಷವು ತನಿಖಾ ಸಂಸ್ಥೆಗೆ ಪತ್ರ ಬರೆದು ರಾಹುಲ್ ಗಾಂಧಿಗೆ ಕೆಲವು ವಿನಾಯಿತಿಗಳನ್ನು ಕೋರಲಿದೆ. ಹಣ ಅಕ್ರಮ ವರ್ಗಾವಣೆ ಅಥವಾ ಯಾವುದೇ ಹಣ ವಿನಿಮಯದ ಬಗ್ಗೆ ಪುರಾವೆಗಳಿಲ್ಲ ಎಂದೂ ಸಾಂಘ್ವಿ ಹೇಳಿದರು.

Exit mobile version