Site icon PowerTV

ಅಯೋಧ್ಯೆಯ ರಾಮಮಂದಿರ ಗರ್ಭಗುಡಿಗೆ ಶಂಕು ಸ್ಧಾಪನೆ

ಅಯೋಧ್ಯೆ : ಹಿಂದುಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮಮಂದಿರದ ಗರ್ಭಗುಡಿಯ ಮೊದಲ ಶಿಲೆಗೆ ಪೂಜೆ ಸಲ್ಲಿಸಿದರು. ಮಂದಿರ ನಿರ್ಮಾಣದ ಹೊಣೆ ಹೊತ್ತ ರಾಮ ಜನ್ಮಭೂಮಿ ಟ್ರಸ್ಟ್, ದೇವಾಲಯದ ಗರ್ಭಗುಡಿಯನ್ನು ರಾಜಸ್ಥಾನದ ಮಖ್ರಾನಾ ಬೆಟ್ಟದಿಂದ ತರಿಸಲಾದ ಬಿಳಿ ಅಮೃತ ಶಿಲೆಯಿಂದ ನಿರ್ಮಾಣ ಮಾಡಲಾಗುವುದು. ಸುಮಾರು 13,300 ಕ್ಯೂಬಿಕ್ ಅಡಿ ಅಮೃತ ಶಿಲೆಯನ್ನು ಬಳಸಲಾಗುವುದು ಎಂದು ಹೇಳಿದೆ. ದೇವಾಲಯದ ಗರ್ಭಗುಡಿಯ ನಿರ್ಮಾಣ ಕಾಮಗಾರಿಯು 2023ರ ಅಂತ್ಯದೊಳಗೆ ಹಾಗೂ ಇಡೀ ರಾಮಮಂದಿರದ ನಿರ್ಮಾಣ ಕಾಮಗಾರಿಯು 2024ರ ಅಂತ್ಯದೊಳಗೆ ಮುಕ್ತಾಯವಾಗಬಹುದು ಎನ್ನಲಾಗಿದೆ.

Exit mobile version